ರಾಜ್ಯ

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಕಲ್ಬುರ್ಗಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹೈದ್ರಾಬಾದ್ ಮಾರ್ಗವಾಗಿ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಿದ ಅರಣ್ಯ ಸಚಿವರು, ಅಲ್ಲಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ ಮೃಗಾಲಯಕ್ಕೆ ಆಗಮಿಸಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು.

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿರುವ ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ ಅವುಗಳಿಗೆ ಯಾವುದೇ ತೊಂದರೆ ಆಗದಂತೆ, ಆರೋಗ್ಯ ಸಮಸ್ಯೆ ಎದುರಾಗದ ರೀತಿಯಲ್ಲಿ ಸೂಕ್ತ ನಿಗಾ ಇಡಬೇಕು, ವನ್ಯಜೀವಿಗಳನ್ನು ಕ್ವಾರಂಟೈನಲ್ಲಿಡಬೇಕು, 30ದಿನಗಳ ಕಾಲ ಗೊತ್ತುಪಡಿಸಿದ ಆಹಾರ ನೀಡಬೇಕು, ಈ ವಿದೇಶಿ ವನ್ಯಜೀವಿಗಳಿಗೆ ಸೋಂಕು ಏನಾದರೂ ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಒಂದು ಕಾಲದಲ್ಲಿ ಕರ್ನಾಟಕದ ಕಾಡುಗಳಲ್ಲಿಯೇ ಸಿವಂಗಿ ಎಂದು ಕರೆಸಿಕೊಳ್ಳುವ ಚೀತಾಗಳಿದ್ದವು. ಆದರೆ ರಾಜ್ಯದ ಕಾಡಿನಲ್ಲಿ ಇವು ನಾಮಾವಶೇಷ ಆಗಿವೆ. ಹೀಗಾಗಿ ಮೃಗಾಲಯಗಳಲ್ಲಾದರೂ ಇವುಗಳನ್ನು ನೋಡಲು ಅವಕಾಶ ಆಗಬೇಕು. ಈ ನಿಟ್ಟಿನಲ್ಲಿ ಅವುಗಳ ಸುರಕ್ಷತೆಗೆ ಆದ್ಯ ಗಮನ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

44 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

50 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

54 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago