ರಾಜ್ಯ

ಮಂಡ್ಯ: ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್‌ ಬ್ಲಾಸ್ಟ್‌

ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಅಥವಾ ಗುರುವಾರ ಆಯ್ದ ಸ್ಥಳಗಳಲ್ಲಿ ಟ್ರಯಲ್​ ಬ್ಲಾಸ್ಟ್​ ನಡೆಸಲಿದ್ದಾರೆ.

ಜನರ ವಿರೋಧದ ನಡುವೆಯೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ಗೆ ಅನುಮತಿ ಸಿಗಲಿದೆಯಾ ಕಾದು ನೋಡಬೇಕಿದೆ. ಸೋಮವಾರ ರಾತ್ರಿಯೇ ಕೆಆರ್​ಎಸ್​​ನ ರಾಯಲ್ ಆರ್ಕಿಡ್ ಹೋಟೆಲ್​ನಲ್ಲಿ ತಜ್ಞರ ತಂಡ ವಾಸ್ತವ್ಯ ಹೂಡಿಸಿದೆ.

ಈ ಟ್ರಯಲ್ ಬ್ಲಾಸ್ಟ್​​ ಅನ್ನು ವಿರೋಧಿಸಿ, ಟ್ರಯಲ್ ಬ್ಲಾಸ್ಟ್​ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್​ಎಸ್​ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ.

ಜೊತೆಗೆ ರೈತ ಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕೂಡ ಪ್ರತ್ಯೇಕವಾಗಿ ಧರಣಿ ನಡೆಸಲು ನಿರ್ಧರಿಸಿದೆ.

ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿತ್ತು. ಬೇಬಿ ಬೆಟ್ಟ ಸೇರಿದಂತೆ ಕೆಆರ್​ಎಸ್​ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು. ಇದಾದ ಬಳಿಕ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯಬೇಕೋ ಬೇಡವೋ, ಬೇಬಿ ಬೆಟ್ಟದ ಗಣಿಗಾರಿಕೆಯಿಂಧ ಕೆಆರ್​ಎಸ್​ ಅಣೆಕಟ್ಟೆಗೆ ಹಾನಿಯಾಗುತ್ತಾ ಎಂದು ತಿಳಿಯಲು ಮಾಡುವ ಉದ್ದೇಶದಿಂದ ಹೈಕೋರ್ಟ್​ ಟ್ರಯಲ್​ ಬ್ಲಾಸ್ಟ್​ ನಡೆಸಲು ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ 4 ದಿನ ಟ್ರಯಲ್​​ ಬ್ಲಾಸ್ಟ್​ ನಡೆಸಲಿದೆ.

ಟ್ರಯಲ್‌ ಬ್ಲಾಸ್ಟ್‌ ನಂತರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಬೇಕೋ ಇಲ್ಲವೋ ಎಂಬ ಬಗೆಗಿನ ಮುಂದಿನ ನಡೆ ತಿಳಿಯಲಿದೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

2 hours ago

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

13 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

13 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

14 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

14 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

15 hours ago