ರಾಜ್ಯ

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. ತಮ್ಮ ಮನೆಯ ದುರಸ್ಥಿ ಮಾಡಿಸುತ್ತಿದ್ದ ಗುರುನಾಥ ಬಡಿಗೇರ, ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಗುರುವಾರ ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಈ ದುರಂತ ಸಂಭವಿಸಿದೆ.

ಮೃತರಲ್ಲಿ ಪತಿ-ಪತ್ನಿ ಹಾಗೂ ಅವರ ಇಬ್ಬರು ಮಕ್ಕಳು ಸೇರಿದ್ದಾರೆ. ಮಲಗಿದ್ದಲ್ಲೇ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುಟುಂಬವು ಹಳೆಯ ಮನೆಯಲ್ಲಿ ಬಾಡಿಗೆಗೆ ಇದ್ದು, ಮನೆಯ ಮಾಲೀಕರು ದುರಸ್ತಿ ಕಾರ್ಯ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಭಾರೀ ಗಾಳಿ ಮತ್ತು ಮಳೆಯಿಂದ ಮನೆಯ ಮೇಲ್ಚಾವಣಿ ಆಕಸ್ಮಿಕವಾಗಿ ಕುಸಿದು ಬಿದ್ದಿದೆ.

ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ದಳ ಸುದ್ದಿ ತಿಳಿದ ತಕ್ಷಣ ಸಿಂದಗಿ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಂದರು. ಮುಸುಕಿದ ಮನೆಯ ಮಧ್ಯೆ ಸಿಲುಕಿದ ನಾಲ್ವರ ಮೃತದೇಹಗಳನ್ನು ಹೊರತೆಗೆಯಲು ತುರ್ತು ಕಾರ್ಯಾಚರಣೆ ನಡೆಸಲಾಯಿತು.ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಮುಗಿಲು ಮುಟ್ಟುವಂತೆ ಆಕ್ರಂದನ ಇಡುತ್ತಿದ್ದ ದೃಶ್ಯ ತುಂಬಾ ಹೃದಯವಿದ್ರಾವಕವಾಗಿತ್ತು. ಪ್ರಸ್ತುತ ತಾಲೂಕು ಆಡಳಿತ ಮತ್ತು ಜಿಲ್ಲಾ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಲಾಗಿದೆ.

ಈ ಘಟನೆಯು ಜಿಲ್ಲೆಯಲ್ಲಿ ಹಳೆಯ ಮನೆಗಳಲ್ಲಿ ವಾಸಿಸುವವರ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಂಗಾರು ಮಳೆಗೆ ಮುಂಚಿತವಾಗಿ ಹಳೆಯ ಕಟ್ಟಡಗಳ ಪರಿಶೀಲನೆ ಮತ್ತು ದುರಸ್ತಿ ಕಾರ್ಯವನ್ನು ತೀವ್ರಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

51 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

53 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

55 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

58 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago