ರಾಜ್ಯ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಹೃದಯ ವಿದ್ರಾವಕ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಲ್ಲೇನಹಳ್ಳಿ ಗ್ರಾಮದ ಆಶಾ (50) ಹಾಗೂ ಮಗಳು ವರ್ಷಿತಾ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಶಾ ಅವರ ಪುತ್ರ ಮೋಹನ್‍ಗೌಡ (27) ಮತ್ತು ಮೊಮ್ಮಗ ಮಯಾನ್‍ಗೌಡ (11) ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಒಂದು ಕಡೆ ಐಷಾರಾಮಿ ಜೀವನ, ಮತ್ತೊಂದು ಕಡೆ ಅತಿಯಾದ ಸಾಲ, ಇನ್ನೊಂದು ಕಡೆ ಚೀಟಿ ವ್ಯವಹಾರ. 5 ಲಕ್ಷ, 10 ಲಕ್ಷ, 50 ಲಕ್ಷದ ಚೀಟಿ ಜೊತೆಗೆ ಯುಗಾದಿಗೆ ಮಟನ್ ಚೀಟಿ, ದೀಪಾವಳಿಗೆ ಪಟಾಕಿ ಚೀಟಿ ಹೀಗೆ ಕೋಟಿ ಕೋಟಿ ವ್ಯವಹಾರ ಮಾಡುತ್ತಿದ್ದವರು ಇಂದು ಮನೆಯಲ್ಲೇ ಶವವಾಗಿರುವುದು ದುರ್ದೈವ.

ಮನೆ ಮಗ ಮೋಹನ್‍ಗೌಡ ಕೋಟ್ಯಾಂತರ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲಗಾರರು ಹಣ ವಾಪಸ್ ಕೇಳುತ್ತಿದ್ದರು. ಹಣ ಹಿಂದಿರುಗಿಸಲು ಸಾಧ್ಯವಾಗದೆ ಸಾಲಗಾರರ ಉಪಟಳದಿಂದ ಈ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿದೆ.

ಅದರಂತೆ ನಿನ್ನೆ ರಾತ್ರಿ ಈ ಕುಟುಂಬ ನಾವು ಸಾಲಗಾರರ ಕಾಟ ತಾಳಲಾರದೆ ಆತಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋ ಮಾಡಿದೆ. ನಂತರ ಮನೆ ಬಾಗಿಲನ್ನು ಲಾಕ್ ಮಾಡಿಕೊಂಡಿದ್ದಾರೆ.
ಮೋಹನ್‍ಗೌಡ ತನ್ನ ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

ವಿಡಿಯೋ ಹರಿಬಿಟ್ಟ ಕೆಲವೇ ನಿಮಿಷಗಳಲ್ಲಿ ಸಂಬಂಧಿಕರು ಗಮನಿಸಿ ಗಾಬರಿಯಾಗಿ ತಕ್ಷಣ ಇವರ ಮನೆ ಬಳಿಗೆ ಬಂದು ಕಾಲಿಂಗ್ ಬೆಲ್ ಒತ್ತಿ ಬಾಗಿಲು ಬಡಿದಿದ್ದಾರೆ.

ಮನೆಯೊಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಮನೆ ಹಿಂಬಾಗಿಲ ಮೂಲಕ ಸಂಬಂಧಿಕರು ಒಳಗೆ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ನಾಲ್ಕು ಮಂದಿ ಬಿದ್ದಿರುವುದು ಕಂಡು ಬಂದಿದೆ. ಅಷ್ಟೊತ್ತಿಗಾಗಲೇ ತಾಯಿ-ಮಗಳ ಪ್ರಾಣಪಕ್ಷಿ ಹಾರಿಹೋಗಿತ್ತು.

ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ ಸಂಬಂಧಿಕರು, ತೀವ್ರ ರಕ್ತಸ್ರಾವವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮೋಹನ್‍ಗೌಡ ಹಾಗೂ ಮಾಯಾಂಕ್‍ನನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

5 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

1 hour ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

1 hour ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

2 hours ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

3 hours ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

3 hours ago