ದಾವಣಗೆರೆ: ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಮೃತಪಟ್ಟಿರುವ ಘಟನೆ ನಡೆದ ಬೆನ್ನಲ್ಲೇ ರಾಜ್ಯದ ಮತ್ತೊಂದು ಕಿರು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಹೆಮರಾಜಿಕ್ ಸೆಪ್ಪಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಜಿಂಕೆಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃಗಾಲಯದ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೃಗಾಲಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ಜನವರಿ.16ರಂದು ಮೃಗಾಲಯದಲ್ಲಿ ಒಂದು ಚುಕ್ಕೆ ಜಿಂಕೆ ಸಾವನ್ನಪ್ಪಿತ್ತು. ಈ ಬಗ್ಗೆ ಪರಿಶೀಲನೆ ನಡೆಸುತ್ತಿರುವಾಗಲೇ ಮರುದಿನ ಮತ್ತೆರಡು ಜಿಂಕೆಗಳು ಸಾವನ್ನಪ್ಪಿವೆ. ಈಗ ಇನ್ನೊಂದು ಜಿಂಕೆ ಸಾವನ್ನಪ್ಪಿದ್ದು, ಒಟ್ಟು ನಾಲ್ಕು ಜಿಂಕೆಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.
ಇನ್ನು ಜಿಂಕೆಗಳ ಸಾವಿನ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಸೋಂಕು ವ್ಯಾಪಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ವೈದ್ಯರು ಇತರೆ ಪ್ರಾಣಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…