ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿ ಬಂಧಿಯಾಗಿದ್ದ ಚಿತ್ರದುರ್ಗದ ಮುರುಘಾಶ್ರೀ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಿದ್ದಾರೆ.
ಮುರುಘಾಶ್ರೀ ಹಲವು ತಿಂಗಳುಗಳಿಂದ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ಕಾರಾಗೃಹದಿಂದ ಬಂಧನ ಮುಕ್ತಗೊಳಿಸಿದೆ.
ಜೈಲಿನಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಪ್ರಥಮ ಬಾರಿಗೆ ಮಾತನಾಡಿದ ಮುರುಘೇಶ್ರೀ, ಬಸವೇಶ್ವರನ ಆರ್ಶೀವಾದದಿಂದ ನಾನು ಇಂದು ಬಂಧನದಿಂದ ಬಿಡುಗಡೆಯಾಗಿದ್ದೇನೆ. ಈ ಸಮಯದಲ್ಲಿ ಅಧಿಕವಾಗಿ ಮಾತನಾಡುವುದಕ್ಕಿಂತ ಮೌನವಾಗಿರುವುದು ಉತ್ತಮ ಎನ್ನಿಸುತ್ತದೆ. ನನಗೆ ಸಿಕ್ಕಿರುವ ಜಯವೂ ಸತ್ಯದ ಜಯವಾಗಿದೆ. ಸ್ವಾಮೀಜಿಗಳಿಗೆ ಸಹನೆ ಎಂಬುದು ಬಹಳ ಮುಖ್ಯವಾಗುತ್ತದೆ. ಹೀಗಾಗಿ ನಾನು ಸಹನೆ ಮತ್ತು ತಾಳ್ಮೆಯಿಂದ ಕಾದಿರುವುದಕ್ಕಾಗಿ ಜಯ ಸಿಗುವ ನಿರೀಕ್ಷೆ ಇತ್ತು ಎಂದರು.
ನಾನು ಜೈಲು ಸೇರಿದ ನಂತರ ಐದು ಪುಸ್ತಕಗಳನ್ನು ಬರೆದಿರುವೆ ಹಾಗೂ ನಾಲ್ಕು ಪುಸ್ತಕಗಳನ್ನು ಓದಿರುವೆ. ಸಮಯ ಬಂದಾಗ ಐದು ಪುಸ್ತಕಗಳನ್ನು ಒಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೆಚ್ಚು ಮಾತನಾಡಲು ಇದು ಸಕಾಲ ಸಮಯವಲ್ಲ ಎಂದು ಹೇಳಿ ಕಾರಿನಲ್ಲಿ ದಾವಣಗೆರೆಯ ಕಡೆಗೆ ತೆರಳಿದ್ದಾರೆ.
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ…
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ ಎಂಬ…
ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…