ಬೆಂಗಳೂರು : ತಮ್ಮ ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.
ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು 4 ಬೆಂಗಳೂರು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ರಾಬಿನ್ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ.
ಸದ್ಯ ರಾಬಿನ್ ಉತ್ತಪ್ಪ ಭಾರತವನ್ನು ತೊರೆದು ದುಬೈನಲ್ಲಿ ನೆಲೆಸಿದ್ದಾರೆ. ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಕಾರಣ ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.
ಟೀಮ್ ಇಂಡಿಯಾ ಪರ 46 ಏಕದಿನ ಪಂದ್ಯಗಳಲ್ಲಿ 42 ಇನಿಂಗ್ಸ್ ಆಡಿರುವ ರಾಬಿನ್ ಉತ್ತಪ್ಪ 6 ಅರ್ಧಶತಕಗಳೊಂದಿಗೆ ಒಟ್ಟು 934 ರನ್ ಕಲೆಹಾಕಿದ್ದಾರೆ. ಹಾಗೆಯೇ 13 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಅವರು 12 ಇನಿಂಗ್ಸ್ಗಳಿಂದ 249 ರನ್ ಬಾರಿಸಿದ್ದಾರೆ. ಈ ವೇಳೆ ಒಂದು ಅರ್ಧಶತಕವನ್ನು ಸಹ ಸಿಡಿಸಿದ್ದರು. 2022 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿರುವ ಉತ್ತಪ್ಪ ಇದೀಗ ಕುಟುಂಬಸ್ಥರೊಂದಿಗೆ ದುಬೈನಲ್ಲಿ ಸೆಟಲ್ ಆಗಿದ್ದಾರೆ.
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…