Mysore
26
broken clouds

Social Media

ಗುರುವಾರ, 21 ಮೇ 2026
Light
Dark

ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್‌

D K Suresh

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಅದರಂತೆ ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ ಡಿ.ಕೆ.ಸುರೇಶ್‌ ಎಂಟ್ರಿ ಪುಸ್ತಕಕ್ಕೆ ಸಹಿ ಹಾಕಿ ಒಳಗಡೆ ಹೋಗಿದ್ದಾರೆ.

ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಜೂನ್.‌19ರಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದಕ್ಕೆ ಉತ್ತರಿಸಿದ್ದ ಡಿ.ಕೆ.ಸುರೇಶ್‌ ಅವರು, ನಾನು ಜೂನ್.‌23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದರು.

Tags:
error: Content is protected !!