ರಾಜ್ಯ

ಎಸ್‌ಎಸ್‌ಎಲ್‌ಸಿ ಪರಿಕ್ಷಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

ಈ ಕುರಿತಂತೆ ಕೆಎಸ್‌ಆರ್ ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ದಿನಾಂಕ 14-03-2024ರಂದು ಸುತ್ತೋಲೆ ಹೊರಡಿಸಿದ್ದಾರೆ.

ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 25.03.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ.

ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಿದ್ದಾರೆ

andolanait

Recent Posts

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

17 mins ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

23 mins ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

45 mins ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

2 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

2 hours ago

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

2 hours ago