Mysore
27
scattered clouds

Social Media

ಭಾನುವಾರ, 25 ಜನವರಿ 2026
Light
Dark

ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಉಚಿತ ಬಸ್‌ : ಮಹತ್ವದ ಆದೇಶ ಹೊರಡಿಸಿದ ಸರ್ಕಾರ

Free buses for government school children

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.

ಎಲ್‍ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಮಕ್ಕಳಿಗೆ ದೊಡ್ಡ ಸಹಾಯವಾಗಲಿದೆ. ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆಯನ್ನ ಸರ್ಕಾರ ನೀಡಲಿದೆ ಎಂದಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಯೋಜನೆಯಡಿ, ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್ ಹೊಂದಿರುವ ಕರ್ನಾಟಕದ ಮಹಿಳೆಯರು ಇದೀಗ ಉಚಿತ ಪ್ರಯಾಣದ ಮಾಡುತ್ತಿದ್ದಾರೆ.

ಪ್ರತಿನಿತ್ಯ ಲಕ್ಷಾಂತರ ಮಹಿಳೆಯುರು ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯು ಮಹಿಳೆಯರಿಗೆ ಪ್ರಯಾಣದ ಮೇಲಿನ ವೆಚ್ಚವನ್ನು ಕಡಿಮೆಗೊಳಿಸಿದೆ. ಉಚಿತ ಪ್ರಯಾಣದಿಂದ ಸಾರಿಗೆ ಸಂಸ್ಥೆಗಳಿಗೆ ಆಗುತ್ತಿರುವ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ. ಹೀಗಾಗಿ ಈ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಯಾವುದೇ ಹೊರೆ ಆಗುತ್ತಿಲ್ಲ.

Tags:
error: Content is protected !!