ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2022-23 ಸಾಲಿನ ರಾಜ್ಯ ಮುಂಗಡಪತ್ರವನ್ನು ಮಂಡಿಸಿದ್ದಾರೆ.
ರಾಜ್ಯ ಬಜೆಟ್ ನಲ್ಲಿ ಮಾಡಿರುವ ಹೊಸ ಯೋಜನೆಗಳು, ಹೊಸ ಘೋಷಣೆಗಳ ಪಟ್ಟಿ ಇಲ್ಲಿದೆ.
. ರೈತರಿಗಾಗಿ ‘ಭೂ ಸಿರಿ’ ನೂತನ ಯೋಜನೆ ಘೋಷಣೆ: ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಸಹಾಯಧನ
- ‘ರೈತ ಸಿರಿ’ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ಗೆ 10 ಸಾವಿರ ರೂ. ಪ್ರೋತ್ಸಾಹ ಧನ
- ‘ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ದಿ
- ‘ಸಹ್ಯಾದ್ರಿ ಸಿರಿ’ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗೆ ಯೋಜನೆ
- ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ರೂ.
- ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ
- ‘ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
- 100 ಕೋಟಿ ರೂ. ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್’ ಯೋಜನೆ
- ‘ಬದುಕುವ ದಾರಿ’ ಯೋಜನೆಯಡಿ ಯುವಜನರಿಗೆ 3 ತಿಂಗಳು ಐಟಿಐ ತರಬೇತಿ
- ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ‘ಯುವಸ್ನೇಹಿ’ ಯೋಜನೆಯಡಿ ತಲಾ 2 ಸಾವಿರ ರೂ.
- ‘ವಿದ್ಯಾವಾಹಿನಿ’ ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ
- ಮಹಿಳೆಯರ ಆರ್ಥಿಕ ಶಕ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಗೃಹಿಣಿ ಶಕ್ತಿ’ ಯೋಜನೆ ಜಾರಿ: 46,278 ಕೋಟಿ ರೂ. ಅನುದಾನ
- ‘ನಮ್ಮ ನೆಲೆ’ ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಿವೇಶನ
- ‘ಜಲನಿಧಿ’ ಯೋಜನೆಯಡಿ ರೈತರ ಜಮೀನುಗಳಲ್ಲಿ ಜಲ ಹೊಂಡ
- ಗೋ ಶಾಲೆಗಳ ಸ್ಥಾಪನೆಗೆ ‘ಪುಣ್ಯ ಕೋಟಿ ದತ್ತು ಯೋಜನೆ’
- ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ ಅಡಿ 355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕ. 20 ಸಾವಿರ ಫಲಾನುಭವಿಗಳಿಗೆ ಅನುಕೂಲ
- ‘ಹಳ್ಳಿ ಮುತ್ತು’ ಯೋಜನೆ ಅಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣ ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳು ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಆಯ್ಕೆಯಾದರೆ ಸರ್ಕಾರವೇ ಸಂಪೂರ್ಣ ಶುಲ್ಕ ಭರಿಸಲಿದೆ.
- ‘ವಿದ್ಯಾವರ್ಧಿನಿ’ ಯೋಜನೆಯಡಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ಗಳಿಗೆ ಅಗತ್ಯ ಮೂಲಸೌಕರ್ಯ
- ‘ಆರೋಗ್ಯ ಪುಷ್ಟಿ’ ಯೋಜನೆ ಅಡಿ ಮಹಿಳೆಯರ ಅಪೌಷ್ಟಿಕತೆ, ರಕ್ತಹೀನತೆ ತಡೆಯಲು ಕ್ರಮ
- ‘ಸ್ವಚೇತನ’ ಯೋಜನೆಯಡಿ 5 ಸಾವಿರ ವಿಕಲ ಚೇತನರಿಗೆ ದ್ವಿಚಕ್ರ ವಾಹನ