Mysore
20
overcast clouds
Light
Dark

ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್‌: ಸಿಎಂ ಮಹತ್ವದ ಘೋಷಣೆ!

ಮಡಿಕೇರಿ : ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಂಸದರೂ ಅವರೇ ಇದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು.

ಸಚಿವ ಕೆ.ಎನ್ ರಾಜಣ್ಣ ಅವರು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಗ್ಗೆ ನಾವು ಗುಲಾಮರೇ ನಮ್ಮನ್ನು ಕೇಳದೇ ವರಿಷ್ಠರು ನಿರ್ಧಾರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಎಲ್ಲರೂ ಒಂದೊಂದು ಹೆಸರನ್ನು ಹೇಳಿದಾದ ಕಷ್ಟವಾಗುತ್ತದೆ.

ಸಾಮಾನ್ಯವಾಗಿ ಈ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ