ಉತ್ತರ ಕನ್ನಡ: ರಾಜ್ಯ ಸರ್ಕಾರದ ಉಚಿತ ಯೋಜನೆಗಳ ವಿರುದ್ಧ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದು, ಉಚಿತ ಯೋಜನೆಗಳು ಬಹಳ ಅಪಾಯಕಾರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಜನರಿಗೆ ಯಾವುದನ್ನೂ ಕೂಡ ಉಚಿತವಾಗಿ ನೀಡಬಾರದು. ಪ್ರತಿಯೊಂದು ಸೇವೆಗೂ ಶುಲ್ಕ ವಿಧಿಸಬೇಕು ಎಂದರು.
ಬಸ್‌ನಲ್ಲಿ ಉಚಿತ ಪ್ರಯಾಣವನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಪ್ರಶ್ನೆ ಮಾಡಿದರು.
ಒಟ್ಟಾರೆಯಾಗಿ ಉಚಿತ ಯೋಜನೆಗಳ ವಿರುದ್ಧ ವಿಪಕ್ಷ ನಾಯಕರು ಪದೇ ಪದೇ ಕಿಡಿಕಾರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕರೇ ಈ ರೀತಿ ಹೇಳಿಕೆ ನೀಡಿರುವುದು ಭಾರೀ ಅಚ್ಚರಿ ಮೂಡಿಸಿದೆ.





