Freedom fighters
ಮಂಡ್ಯ : ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಮತ್ತು ಕುಟುಂಬ ಮಾಸಿಕ ಪಡೆಯುತ್ತಿರುವ ಫಲಾನುಭವಿಗಳಿಗೆ ೪.೮೫ ಕೋಟಿ ರೂ. ಮಾಸಿಕ ಸಂಭಾವನೆ ಪಾವತಿಸುವುದು ಬಾಕಿ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು ಮತ್ತು ಕುಟುಂಬ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಮಾಸಿಕ ೧೦ ಸಾವಿರ ರೂ. ಗೌರವ ಸಂಭಾವನೆ ಪಾವತಿಸಲಾಗುತ್ತಿದೆ. ಚಾಮರಾಜನಗರ, ಹಾಸನ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪಾವತಿಸಬೇಕಾದ ಮಾಸಿಕ ಸಂಭಾವನೆ ಬಾಕಿ ಇಲ್ಲ ಎಂದು ತಿಳಿಸಿದ್ದಾರೆ.
ಯಾವ ಜಿಲ್ಲೆ, ಎಷ್ಟು ಬಾಕಿ?
ಬೆಂಗಳೂರು (ನಗರ) – ೫೯.೦೨ ಲಕ್ಷ ರೂ.,
ಮಂಡ್ಯ -೧೯.೭೦ ಲಕ್ಷ ರೂ.,
ಮೈಸೂರು – ೧೨ ಲಕ್ಷ ರೂ.,
ಬೆಂಗಳೂರು (ಗ್ರಾ) ೩.೪ ಲಕ್ಷ ರೂ.,
ರಾಮನಗರ ೯೦ ಸಾವಿರ ರೂ.,
ಕೊಡಗು – ೮೦ ಸಾವಿರ ರೂ.
ಜೀವಂತ ಇರುವ ಸ್ವಾತಂತ್ರ್ಯ ಹೋರಾಟಗಾರರ ಸಂಖ್ಯೆ ೧೫೦
ಬೆಂಗಳೂರು (ಗ್ರಾ), ಚಾಮರಾಜನಗರ, ಉಡುಪಿ, ಕೊಡಗು ಸೇರಿದಂತೆ ಒಟ್ಟು ೧೦ ಜಿಲ್ಲೆಗಳಲ್ಲಿ ಜೀವಂತವಿರುವ ಸ್ವಾತಂತ್ರ್ಯ ಹೋರಾಟಗಾರರು ಯಾರೂ ಇಲ್ಲ. ಆದರೆ, ಪ್ರಸ್ತುತ ವಿವಿಧ ಜಿಲ್ಲೆಗಳಲ್ಲಿ ಜೀವಂತವಿರುವ, ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಪಡೆಯುತ್ತಿರುವ ಫಲಾನುಭವಿಗಳ ಒಟ್ಟು ಸಂಖ್ಯೆ ೧೫೦ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…