ರಾಜ್ಯ

ಜುಲೈ.1ರಿಂದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮೊಬೈಲ್‌ ಹಾಜರಾತಿ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಜುಲೈ.1ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ ಹಿತೈಷಿ ಹಾಡಲು ನೂತನ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯ ಹಾರ್ಡ್‌ವೇರ್- ಸಾಫ್ಟ್‌ವೇರ್‌ಗೂ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣಿಕರಣವನ್ನು ಅವಲಂಬಿಸಿದೆ.

ಹಾರ್ಡ್‌ವೇರ್ ಸಾಧನಗಳಿಗೆ ಆಗಾಗ್ಗೆ ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದೆ. ಇದು ಗಣನೀಯ ವೆಚ್ಚಗಳಿಗೆ ಕಾರಣವಾಗಿತ್ತು. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಂಬಂಧ ದೂರ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಇದು ಸಹಕಾರಿಯಾಗಿರಲಿಲ್ಲ ಎಂದು ತಿಳಿಸಿದರು.

ರಾಜ್ಯದ 12 ಸಾವಿರ ಆರೋಗ್ಯ ಸಂಸ್ಥೆಗಳನ್ನೊಳಗೊಂಡು ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಆಡಳಿತದ ಚೌಕಟ್ಟಿನಲ್ಲಿ ಮೊಬೈಲ್ ಹಾಜರಾತಿ ವ್ಯವಸ್ಥೆಯಿದ್ದು, ಇನ್ನು ಮುಂದೆ ವೈದ್ಯರ ಕರಾರುವಕ್ಕಾದ ಲಭ್ಯತೆಯನ್ನು ಸರ್ಕಾರ ಖಾತ್ರಿಪಡಿಸಲಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

5 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

5 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

11 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

11 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

11 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

11 hours ago