Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ನ.4 ರಿಂದ 6ರವರೆಗೆ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಭಂಧ

ಚಿಕ್ಕಮಗಳೂರು : ನವೆಂಬರ್ 4 ರಿಂದ 6 ವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ ಮೂರು ದಿನ ಗಿರಿ ಭಾಗ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಈ ಸಮಯದಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ಆಲೋಚನೆಯಲ್ಲಿದ್ದರೆ ದಿನಾಂಕವನ್ನು ಬದಲಾಯಿಸಿಕೊಳ್ಳಿ ಎಂದು ಜಿಲ್ಲಾಡಳಿತ ಹೇಳಿದೆ.

ದತ್ತಮಾಲಾ ಅಭಿಯಾನ ನಡೆಯುವ ಸಮಯದಲ್ಲಿ ಹೆಚ್ಚಿನ ಭಕ್ತರು ಇಲ್ಲಿಗೆ ಭೇಟಿ ನೀಡುವ ಉದ್ದೇಶದಿಂದ ಪ್ರವಾಸಿಗರಿಗೆ ಅನಾನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಹಾಗಾಗಿ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಬರುವ ಪ್ರವಾಸಿಗರಿಗೆ ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ನಿಷೇಧ ಹೇರಲಾಗಿದೆ.

ಅ. 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ