From Now On Scoring 33% Marks in SSLC Will Be Considered as Pass
ಬೆಂಗಳೂರು : ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತೀರ್ಣ ಅಂಕವನ್ನು ಕಡಿತಗೊಳಿಸಲಾಗಿದೆ.
ಪರೀಕ್ಷಾ ಸುಧಾರಣೆಗೆ ಮುಂದಾಗಿರುವ ಶಿಕ್ಷಣ ಇಲಾಖೆ ಈ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ ಶೇ.33 ಅಂಕ ಪಡೆದರೂ ಉತ್ತೀರ್ಣರಾಗಲಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಈ ಹಿಂದೆ ಒಟ್ಟಾರೆ ಉತ್ತೀರ್ಣ ಶೇ. 35 ಇತ್ತು. ಪ್ರತಿ ವಿಷಯದಲ್ಲಿ 35 ಅಂಕ ಪಡೆಯಬೇಕಿತ್ತು. ಈಗ ಪ್ರತಿ ವಿಷಯದಲ್ಲಿ 30 ಅಂಕ ಪಡೆದರೆ ಉತ್ತೀರ್ಣ. ಅಂದರೆ ಪಾಸಿಂಗ್ ಅಗ್ರಿಗೇಟ್ 33% ಬರಬೇಕು. ಸಿಬಿಎಸ್ಇ ಮಾಡಲ್ ನಲ್ಲಿ ಇದೇ ಮಾದರಿ ಇದೆ. ಓವರ್‌ಆಲ್ ಅಗ್ರಿಗೇಟ್ ಪಾಸಿಂಗ್ ಮಾರ್ಕ್ಸ್ ಶೇಕಡಾ 33ಕ್ಕೆ ಕಡಿತ ಮಾಡಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 206 ಅಂಕ ಪಡೆದರೆ ಉತ್ತೀರ್ಣರಾಗಲಿದ್ದಾರೆ. ಇನ್ನು ಈ ಬಗ್ಗೆ ಸರ್ಕಾರ, ಸಾರ್ವಜನಿಕರ ಅಕ್ಷಪಣೆ ಪಡೆಯಲು ಮುಂದಾಗಿದ್ದು, ಜನರ ಅಭಿಪ್ರಾಯ ತಿಳಿಸಲು 15 ದಿನ ಕಾಲಾವಕಾಶ ನೀಡಲಾಗಿದೆ.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…