ರಾಜ್ಯ

ಸೆಪ್ಟೆಂಬರ್.‌22ರಿಂದ ನಂದಿನಿ ಕೆಲ ಉತ್ಪನ್ನಗಳ ದರ ಇಳಿಕೆ

ಬೆಂಗಳೂರು: ಕೇಂದ್ರ ಸರ್ಕಾರವು ಸರಕು ಸೇವಾ ತೆರಿಗೆ ಪರಿಷ್ಕರಣೆ ಮಾಡಿ ದೇಶದ ಜನತೆಗೆ ಬೆಲೆ ಏರಿಕೆ ಬಿಸಿ ತಗ್ಗಿಸಿದ ಬೆನ್ನಲ್ಲೇ ಸೋಮವಾರದಿಂದಲೇ (ಸೆ.22) ಅನ್ವಯವಾಗುವಂತೆ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ.

ಕೇಂದ್ರ ಸರ್ಕಾರದ ಸೂಚನೆಯಂತೆ ಕೆಎಂಎಫ್‌ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ ಸಾಧ್ಯತೆಯಿದೆ. ದರ ಇಳಿಕೆ ಸಂಬಂಧ ಕೆಎಂಎಫ್‌ನ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ಕೂಡ ನಡೆಸಲಿದೆ. ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌‍ಟಿಯನ್ನ ಶೇ.12ರಿಂದ 5ಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ನಂದಿನಿಯ ವಿವಿಧ ಉತ್ಪನ್ನಗಳ ದರ ಇಳಿಕೆಯಾಗಲಿದೆ ಎನ್ನಲಾಗಿದೆ.

ಬೆಣ್ಣೆ, ತುಪ್ಪ, ಚೀಸ್‌‍ ಮೇಲೆ ಮೊದಲು 12%ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
ಪನ್ನಿರ್‌ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್‌ ಲೈಫ್‌) ಮೊದಲು 5% ರಷ್ಟು ಜಿಎಸ್‌‍ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ.

ಮೊಸರು ದರ ಇಳಿಕೆ ಸಾಧ್ಯತೆ: ಮೊಸರಿನ ದರ ಲೀಟರ್‌ಗೆ 4 ರೂಪಾಯಿ ವರೆಗೆ ಕಡಿಮೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಧಿಕಾರಿಗಳ ಜೊತೆ ಸಭೆ ಬಳಿಕ ನಿರ್ಧಾರ ತೆಗೆದುಕೊಳ್ಳಲಿದ್ದು, ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೊಳಿಸುವಂತೆ ಮಾರಾಟಗಾರರಿಗೆ ಸೂಚನೆ ನೀಡುವ ಸಾಧ್ಯತೆ ಇದೆ.
2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್‌‍ಟಿ ಜಾರಿಗೊಳಿಸಲಾಗಿತ್ತು. ಇದಾದ ಬಳಿಕ 2022ರಲ್ಲಿ ಜಿಎಸ್‌‍ಟಿಯನ್ನು ಶೇ 12ಕ್ಕೆ ಹೆಚ್ಚಿಸಲಾಗಿತ್ತು. ಈಗ ತೆರಿಗೆ ದರ ಕಡಿಮೆ ಮಾಡಿರುವುದರಿಂದ ಗ್ರಾಹಕರಿಗೆ ಸ್ವಲ್ಪ ಮಟ್ಟಿಗೆ ಹೊರೆ ಕಡಿಮೆಯಾಗಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago