ರಾಜ್ಯ

ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲೂ ಕಂಬಳ ಆಯೋಜನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುತ್ತದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ ಕ್ರೀಡೆಗೆ ಶಾಶ್ವತವಾಗಿ ಪ್ರೋತ್ಸಾಹ ನೀಡಬೇಕು ಎಂದು ಸರ್ಕಾರ ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಕಂಬಳದ ಕೋಣಗಳನ್ನು ಸಾಕಿ, ಅದರೊಂದಿಗೆ ತೋರಿಸುವ ಪ್ರೀತಿ ಅನನ್ಯವಾದದ್ದು, ಜನಪದ ಸಂಸ್ಕೃತಿ ಉಳಿಸಲು ಸರ್ಕಾರ ಸದಾ ನೆರವು ನೀಡಲಿದೆ ಎಂದರು.

ಇನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಕ್ರೀಡಾಕೂಟದಲ್ಲೂ ಕಂಬಳ ಆಯೋಜನೆ ಮಾಡಲಾಗುವುದು ಎಂದು ಹೇಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

IPL 2025 | ಲಖನೌ ವಿರುದ್ಧ ಚೆನ್ನೈಗೆ ಜಯ

ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್‌…

4 hours ago

ಮಡಿಕೇರಿ | ಕ್ಷುಲ್ಲಕ ಕಾರಣ ; ಮಚ್ಚಿನಿಂದ ವ್ಯಕ್ತಿ ಮೇಲೆ ಹಲ್ಲೆ

ಮಡಿಕೇರಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಲ್ಲೂರು ಗ್ರಾಮದಲ್ಲಿ ಸೋಮವಾರ…

4 hours ago

ಹಿರಿಯ ಪತ್ರಕರ್ತೆ ಛಾಯಾ ಶ್ರೀವತ್ಸ ನಿಧನ

ಬೆಂಗಳೂರು : ಸ್ವತಂತ್ರ ಪತ್ರಕರ್ತರಾಗಿದ್ದ ಬಹುಮುಖ ಪ್ರತಿಭೆ ಛಾಯಾ ಶ್ರೀವತ್ಸ (78) ಇಂದು(ಏ.14) ನಿಧನರಾಗಿದ್ದಾರೆ. ಮೂಲತಃ ಮೈಸೂರಿನವರಾದ ಅವರು ಬಾಲಕಿಯಾಗಿದ್ದಾಗ…

5 hours ago

ಮೈಸೂರು | ದಿಢೀರ್‌ ಮಳೆಗೆ ವಾಹನ ಸವಾರರು ಹೈರಾಣು

ಮೈಸೂರು : ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ನಗರದ ಹಲವೆಡೆ ಮಳೆಯಾಗಿದೆ. ಮುಂದಿನ…

6 hours ago

ರಂಗಾಯಣ : ಚಿಣ್ಣರ ಮೇಳಕ್ಕೆ ಸಂಭ್ರಮದ ಚಾಲನೆ

ಮೈಸೂರು : ನಗರದ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದಲ್ಲಿ ‘ಬಾಲ್ಯ ಅಮೂಲ್ಯ’ ಶೀರ್ಷಿಕೆಯಡಿ ಆಯೋಜಿಸಿರುವ 25 ದಿನಗಳ ‘ಚಿಣ್ಣರ ಮೇಳ’ಕ್ಕೆ ವನ್ಯಜೀವಿ…

7 hours ago

ಮೈಸೂರು ವಿವಿಯಲ್ಲಿ ಸಂವಿಧಾನ ಪೀಠ, ಬೆಂಗಳೂರಲ್ಲಿ ಅತೀ ಎತ್ತರದ ಅಂಬೇಡ್ಕರ್‌ ಪ್ರತಿಮೆ ಸ್ಥಾಪನೆ : ಸಿಎಂ ಘೋಷಣೆ

ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್‌…

7 hours ago