ರಾಜ್ಯ

ಇಂದಿನಿಂದ ರಾಜ್ಯದಲ್ಲಿ ಮಳೆ ಚುರುಕು: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಬೀದರ್‌, ಧಾರವಾಡ, ಕಲಬುರ್ಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೂಡ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನು ಭಾರೀ ಮಳೆಯಾಗಲಿರುವ ಪರಿಣಾಮ ಗುಡ್ಡ ಕುಸಿತ ಸೇರಿದಂತೆ ಹಲವು ಅನಾಹುತ ಸಂಭವಿಸುವ ಸಾಧ್ಯತೆಯಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

9 mins ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

1 hour ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

2 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

2 hours ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

3 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

6 hours ago