ರಾಜ್ಯ

ರಾಜ್ಯದ ಪೆಟ್ರೋಲ್ ಬಂಕ್ ಗಳಲ್ಲಿ ಕನ್ನಡದಲ್ಲೂ ಇರಲಿದೆ ಇಂಧನ ಬೆಲೆಗಳ ಪ್ರದರ್ಶನ

ಕರ್ನಾಟಕದಲ್ಲಿನ ಅಂಗಡಿ,‌ ಮುಂಗಟ್ಟುಗಳಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಿರಬೇಕು ಎಂಬ ಕೂಗು ಆಗಿಂದಾಗ್ಗೆ ಕೇಳಿಬರುತ್ತಲೇ ಇದ್ದು, ಇತ್ತೀಚೆಗಷ್ಟೇ ಈ ವಿಚಾರವಾಗಿ ಪ್ರತಿಭಟನೆಗಳು ನಡೆದಿವೆ ಹಾಗೂ ರಾಜ್ಯ ಸರ್ಕಾರ ಅಂಗಡಿ ಮುಂದಿನ ಬೋರ್ಡ್‌ಗಳಲ್ಲಿ 60% ಕನ್ನಡ ಕಡ್ಡಾಯ ಎಂಬ ನಿಯಮವನ್ನೂ ಸಹ ಜಾರಿಗೆ ತಂದಿದೆ.

ಈ ಮಹತ್ವದ ತೀರ್ಮಾನ ಕನ್ನಡಿಗರಲ್ಲಿ ಖುಷಿ ತಂದಿದ್ದು, ಇದೀಗ ರಾಜ್ಯದಲ್ಲಿನ ಪೆಟ್ರೋಲ್ ಬಂಕ್ ಗಳಲ್ಲಿ ಇಂಧನದ ದರ ಪ್ರದರ್ಶನ ಕನ್ನಡದಲ್ಲಿಯೂ ಸಹ ಇರಲಿದೆ ಎಂದು ಕೇಂದ್ರ ಪೆಟ್ರೊಲಿಯಂ ಸಚಿವ ಹರ್ದೀಪ್ ಸಿಂಗ್ ಹೇಳಿಕೆ ನೀಡಿದ್ದಾರೆ‌.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಹರ್ದೀಪ್ ಸಿಂಗ್ ಇಂಧನ ಬೆಲೆಗಳ ಪ್ರದರ್ಶನ ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮಾತ್ರ ಇದ್ದು ಕನ್ನಡದಲ್ಲೂ ಬೇಕು ಎಂಬ ಮನವಿ ಇತ್ತು. ಅದರಂತೆ ಇಂದಿನಿಂದ ( ಜನವರಿ 10 ) ಕನ್ನಡದಲ್ಲಿ ಪೆಟ್ರೋಲ್ ದರಗಳ ಪ್ರದರ್ಶನವಾಗಲಿದೆ ಎಂದು ತಿಳಿಸಿದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago