ಹೊಸಪೇಟೆ: ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಸಂಪೂರ್ಣ ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ರೊಡನೆ ಬಾಗಿನ ಅರ್ಪಿಸಿದರು.
ರಾಜ್ಯದಲ್ಲಿ ತುಂಗಾಭದ್ರ ಜಲಾಶಯವನ್ನು ಆಶ್ರಯಿಸಿ 13 ಲಕ್ಷ ಎಕರೆ ಜಮೀನಿಗೂ ಹೆಚ್ಚು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯುತ್ತಿತ್ತು. ಅಲ್ಲದೆ ಈ ಜಲಾಶಯದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೂ ನೀರು ಪೂರೈಕೆಯಾಗುತ್ತಿತ್ತು.
ಇದೀಗ ಜಲಾಶಯ ಭರ್ತಿಯಾಗಿರುವುದರಿಂದ ಬೆಳೆಗೆ ನೀರು ಲಭಿಸುವುದು ಬಹುತೇಕ ಖಚಿತವಾಗಿದ್ದು, ಇದಕ್ಕೆ ಸಾಕ್ಷಿಯಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು, ತುಂಗಭದ್ರೆಗೆ ಬಾಗಿನ ಅರ್ಪಿಸಿದ್ದಾರೆ. ಇದರಿಂದ ನೆರೆ ರಾಜ್ಯಗಳಿಗೂ ಒಳ್ಳೆಯ ಸಂದೇಶ ರವಾನೆಯಾದಂತಾಗಿದೆ.
ಈ ವರ್ಷದ ಮುಂಗಾರು ಪ್ರಾರಂಭದಲ್ಲೇ ಉತ್ತಮವಾಗಿದ್ದರಿಂದ ಜುಲೈ ಕೊನೆಯ ವಾರದಲ್ಲೇ ಜಲಾಶಯ ಭರ್ತಿಯಾಗಿತ್ತು. ಹೀಗಾಗಿ ಆ.6ರಂದೇ ತುಂಗಭದ್ರೆಗೆ ಬಾಗಿನ ಅರ್ಪಿಸಲು ದಿನ ನಿಗಧಿಯಾಗಿತ್ತು. ಆದರೆ, ಆ ವೇಳೆ ರಾಜ್ಯದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಸರ್ಕಾರ ಅಲ್ಲಲ್ಲಿ ಸಮಾವೇಶಗಳನ್ನು ಆಯೋಜಿಸಿದ್ದರಿಂದ ಅದರಲ್ಲಿ ಪಾಲ್ಗೊಂಡಿದ್ದ ಜಲಸಂನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಗೈರಾಗುವುದು ಅನಿವಾರ್ಯವಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಂದೂಡಿದ್ದರು.
ನಂತರ ಆ.13 ರಂದು ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗಧಿಯಾಗಿತ್ತು. ಆದರೆ, ಆ.10ರ ರಾತ್ರಿ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಕಾರಣ ಆ ದಿನವೂ ಸಹ ಬಾಗಿನ ಅರ್ಪಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇದನ್ನು ವೀಕ್ಷಿಸಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಮಿಸಿ, ಅಣೆಕಟ್ಟು ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ನೂತನ ಗೇಟ್ ಅಳವಡಿಸಲು ಸೂಚಿಸಿದರು.
ತಜ್ಞರು ಹಾಗೂ ಸಿಬ್ಬಂದಿಯ ಸಂಪೂರ್ಣ ಪ್ರಯತ್ನದಿಂದ ವಾರದೊಳಗೆ ತಾತ್ಕಾಲಿಕ ಗೇಟ್‌ನ್ನು ಅಳವಡಿಸಲಾಗಿತ್ತು. ಇದರಿಂದ ತುಂಗಾಭದ್ರಾ ನದಿಯ ನೀರು 30 ಟಿಎಂಸಿಯಷ್ಟು ಪೋಲಾಗುವುದನ್ನು ತಪ್ಪಿಸಲಾಗಿತ್ತು. ಇದೀಗ ಪುನಃ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದಾರೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…