Mysore
20
overcast clouds
Light
Dark

ಗ್ಯಾರಂಟಿಗೆ ಹಣ ಹೊಂದಿಸಲು ಹಾಲಿನ ದರ ಹೆಚ್ಚಳ ಎಂದ ಸಚಿವ ಸಂತೋಷ್‌ ಲಾಡ್‌

ಧಾರವಾಡ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್‌ ಲಾಡ್‌ ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ.

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರವೂ ಕೂಡ ದುಬಾರಿಯಾಗಿದೆ. ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಈಗಾಗಲೇ ಇಂಧನ ಬೆಲೆ ಏರಿಕೆಯಿಂದ ಜನ ಶಾಕ್‌ ಆಗಿದ್ದಾರೆ. ಇದರ ಜೊತೆಗೆ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ಜನರು ಹೇಗೆ ಜೀವನ ನಡೆಸುತ್ತಾರೆ ಎಂದು ಬಿಜೆಪಿಗರು ಕಿಡಿಕಾರಿದ್ದಾರೆ.

ಹಾಲಿನ ದರ ಏರಿಕೆ ಬಗ್ಗೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್‌ ಲಾಡ್‌ ಅವರು, ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿಯವರು ಸುಖಾ ಸುಮ್ಮನೆ ಎಲ್ಲದಕ್ಕೂ ಟೀಕೆ ಮಾಡುತ್ತಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ತಂದು ಜನತೆಗೆ ಅನುಕೂಲ ಮಾಡಿಕೊಟ್ಟಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದ ಅಭಿವೃದ್ಧಿಗೋಸ್ಕರ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.