ಧಾರವಾಡ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರವೂ ಕೂಡ ದುಬಾರಿಯಾಗಿದೆ. ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಈಗಾಗಲೇ ಇಂಧನ ಬೆಲೆ ಏರಿಕೆಯಿಂದ ಜನ ಶಾಕ್ ಆಗಿದ್ದಾರೆ. ಇದರ ಜೊತೆಗೆ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ಜನರು ಹೇಗೆ ಜೀವನ ನಡೆಸುತ್ತಾರೆ ಎಂದು ಬಿಜೆಪಿಗರು ಕಿಡಿಕಾರಿದ್ದಾರೆ.
ಹಾಲಿನ ದರ ಏರಿಕೆ ಬಗ್ಗೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಅವರು, ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿಯವರು ಸುಖಾ ಸುಮ್ಮನೆ ಎಲ್ಲದಕ್ಕೂ ಟೀಕೆ ಮಾಡುತ್ತಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ತಂದು ಜನತೆಗೆ ಅನುಕೂಲ ಮಾಡಿಕೊಟ್ಟಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದ ಅಭಿವೃದ್ಧಿಗೋಸ್ಕರ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…