ಬೆಂಗಳೂರು: ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಪ್ರಿಲ್, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್ ತಿಂಗಳದ್ದು ಹೆಚ್ಚು ಕಡಿಮೆ ಬಿಡುಗಡೆಯಾಗಿದೆ ಎಂದು ಹೇಳಿದರು.
ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಿಲ್ಲ. ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:- ಗುಂಡ್ಲುಪೇಟೆ ಅರಣ್ಯಕ್ಕೆ ಅಕ್ರಮ ಪ್ರವೇಶ: ಅರಣ್ಯ ಇಲಾಖೆಯಿಂದ ಇಬ್ಬರಿಗೆ 25,000 ದಂಡ
ಇನ್ನು ಮುಂದುವರಿದು ಮಾತನಾಡಿದ ಅವರು, ಯಾರೂ ಕೂಡ ಊಹಾಪೋಹಗಳನ್ನು ನಂಬಬೇಡಿ. ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.





