ಬೆಂಗಳೂರು: ಈ ಹಿಂದೆ ಸಚಿವ ಸತೀಶ್ ಜಾರಕಿಹೊಳಿ ಆಯೋಜಿಸಿದ್ದ ಔತಣಕೂಣದ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ನಾಳೆ ಔತಣಕೂಟ ಏರ್ಪಡಿಸಿದ್ದು, ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು(ಜನವರಿ.7) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಏರ್ಪಡಿಸಿದ್ದ ಡಿನ್ನರ್ ಪಾರ್ಟಿಯಲ್ಲೂ ಸಹ ಸಿಎಂ ಸಿದ್ದರಾಮಯ್ಯ ಹೋಗಿ ಊಟ ಮಾಡಿದ್ದರು. ಅದರಂತೆಯೇ ನಾಳೆಯೂ(ಜ.8) ಕೂಡ ಪಕ್ಷದ ಸಚಿವರು, ಶಾಸಕರು ಹಾಗೂ ಮಾಜಿ ಶಾಸಕರು ಮತ್ತು ಸಚಿವರೊಂದಿಗೆ ಡಿನ್ನರ್ ಪಾರ್ಟಿ ಆಯೋಜಿಸಲಾಗಿದೆ. ಹೀಗಾಗಿ ಈ ಪಾರ್ಟಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದ್ದಾರೆ.
ಇನ್ನೂ ಎಸ್‌ಸಿ, ಎಸ್‌ಟಿ ಸಮುದಾಯದ ವತಿಯಿಂದ ಸಮಾವೇಶ ನಡೆಸುವ ಉದ್ದೇಶವಿದೆ. ಹಾಗಾಗಿ ನಾಳೆ ಸಂಜೆ ಏಳು ಗಂಟೆಗೆ ಎಸ್‌ಸಿ ಮತ್ತು ಎಸ್‌ಟಿ ಸಮಾವೇಶದ ಪೂರ್ವಭಾವಿ ಸಭೆ ಇದೆ. ಈ ಸಭೆ ಮುಗಿದ ನಂತರ ತಮ್ಮ ಮನೆಯಲ್ಲಿ ಡಿನ್ನರ್ ಪಾರ್ಟಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…