ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ಮಂಗಳೂರಿನಲ್ಲಿ ಯುವಕನ ಕೊಲೆ ಪ್ರಕರಣದಲ್ಲಿ ಮಹತ್ವದ ಮಾಹಿತಿ ಸಿಕ್ಕಿದ್ದು, ಅದರ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರತಿಬಾರಿ ಈ ರೀತಿಯ ಘಟನೆಗಳಾದಾಗ ಸುಮ್ಮನಿರಲಾಗುವುದಿಲ್ಲ. ಕೋಮು ಹಿಂಸೆ ನಿಗ್ರಹ ಪಡೆ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿ ವಾತಾವರಣ ಕೆಡಿಸಿದ್ದಾರೆ. ಇವರು ಒಂದು ಕೊಲೆ ಮಾಡಿದರೆ ಅವರು ಇನ್ನೊಂದು ಕೊಲೆ ಮಾಡುವುದನ್ನು ನೋಡಿಕೊಂಡು ಸುಮ್ಮನಿರಲಾಗುವುದಿಲ್ಲ. ಕೋಮು ಹಿಂಸೆ ನಿಗ್ರಹ ಪಡೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಆರಂಭವಾಗಲಿದೆ. ಒಂದು ಕಡೆ ಕಾನೂನು ಜಾರಿ ಮತ್ತೊಂದು ಕಡೆ ಶಾಂತಿ ಪಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ನಿನ್ನೆ ಸರ್ಕಾರ ಆದೇಶ ಹೊರಡಿಸಿ, ಕೋಮು ಹಿಂಸೆ ನಿಗ್ರಹ ಪಡೆ ತಕ್ಷಣ ಜಾರಿಗೆ ಬರಲಿದೆ. ಪಡೆಗೆ ಯಾರು ನೇತೃತ್ವ ವಹಿಸಲಿದ್ದಾರೆ, ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ ಎಂದು ಹೇಳಿದರು.
ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ. ಜನರು ಅಲ್ಲಿ ಜೀವನ ಮಾಡಲು ಆಗುತ್ತದೆಯೇ ? ಇದನ್ನು ಸರ್ಕಾರ ನೋಡಿಕೊಂಡು ಸುಮನೆ ಇರುವುದಿಲ್ಲ ಎಂದರು.
ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಘಟನೆಯಾದಾಗ ನಾಲ್ಕು ಜನರನ್ನು ಬಂಧಿಸಿದ್ದೇವೆ. ಇನ್ನೂ ಮುಂದುವರೆದು ಕೆಲವರ ಹೇಳಿಕೆಗಳಲ್ಲಿ ಮಾಹಿತಿಗಳು ಸಿಕ್ಕಿವೆ ಅದರ ಆಧಾರದ ಮೇಲೂ ಮುಲ್ಲಾಜಿಲ್ಲದೆ ಯಾರನ್ನೂ ಹೊರತು ಪಡಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು ಹೋದರೆ ನಿಲ್ಲಿಸಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…