ರಾಜ್ಯ

ಬಿಟಿಎಂ ಲೇಔಟ್ ಯುವತಿಯ ಮೇಲೆ ದೌರ್ಜನ್ಯ ಪ್ರಕರಣ: ಜಿ.ಪರಮೇಶ್ವರ್‌ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಇಲ್ಲಿನ ಬಿಟಿಎಂ ಲೇಔಟ್ ನಲ್ಲಿನ ಯುವತಿಯ ಮೇಲಿನ ದೌರ್ಜನ್ಯ ಘಟನೆಯ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹೇಳಿಕೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿರುವುದನ್ನು ಸ್ವತಃ ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿನ ಯುವತಿಯ ಮೇಲಿನ ದೌರ್ಜನ್ಯ ಘಟನೆಯ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹೇಳಿಕೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿರುವುದನ್ನು ಸ್ವತಃ ಒಪ್ಪಿಕೊಂಡಂತಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ದಿನದಿಂದಲೂ ಕೊಲೆ, ಸುಲಿಗೆ, ದರೋಡೆ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಸರಣಿ ರೂಪದಲ್ಲಿ ವರದಿಯಾಗುತ್ತಲೇ ಇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುವುದರಲ್ಲಿ ವಿಶೇಷತೆ ಏನು ಇಲ್ಲ, ಅದನ್ನು ಗಂಭೀರವಾಗಿ ಪರಿಗಣಿಸುವ ಅನಿವಾರ್ಯತೆಯಿಲ್ಲ ಎನ್ನುವ ರೀತಿಯಲ್ಲಿ  ರಾಜ್ಯದಲ್ಲಿ ಕಾನೂನು ವ್ಯವಸ್ಥೆಯ ಆಡಳಿತ ಸಾಗಿದೆ. ನಡು ರಸ್ತೆಯಲ್ಲಿ ಹೆಣ್ಣು ಮಗಳೊಬ್ಬಳಿಗೆ ಕಿರಾತಕರು ನೀಡುವ ಕಿರುಕುಳವನ್ನು ಮಾಮೂಲಿ ಘಟನೆ ಎಂಬ ರೀತಿಯಲ್ಲಿ ಹೇಳಿರುವ ಗೃಹ ಸಚಿವರ ಮಾತುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆಯನ್ನು ಕುಗ್ಗಿಸುವ ನಡೆಯಾಗಿದೆ. ಗೃಹ ಸಚಿವರ ಈ ಮಾತುಗಳು ಅವರ ಅಸಮರ್ಥತೆ ಮಾತುಗಳನ್ನು ಪ್ರತಿಬಿಂಬಿಸಿದೆ ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಗಂಭೀರ ಘಟನೆಗಳು ನಡೆದಾಗಲೆಲ್ಲ ಸಹಜ ಎಂಬಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿ ಕೈ ತೊಳೆದುಕೊಳ್ಳುವ ಗೃಹ ಸಚಿವರು ಬಿಟಿಎಂ ಲೇಔಟ್‌ನ ಘಟನೆಯನ್ನು ಅದೇ ರೀತಿಯಲ್ಲಿ ಪ್ರತಿಕ್ರಿಯಿಸಿರುವುದು ನಿಜಕ್ಕೂ ದುರ್ದೈವದ ಸಂಗತಿ. ರಾಜ್ಯದ ಮುಖ್ಯಮಂತ್ರಿಗಳು ಈ ಸಂಬಂಧ ರಾಜ್ಯದ ಕಾನೂನು ವ್ಯವಸ್ಥೆಯ ವೈಫಲ್ಯದ ಕುರಿತು ತಮ್ಮ ನೈತಿಕ ಜವಾಬ್ದಾರಿಯ ಹೇಳಿಕೆ ನೀಡಲಿ ಎಂದು ಸವಾಲು ಹಾಕಿದ್ದಾರೆ.

ಕಾನೂನು ಸುವ್ಯವಸ್ಥೆ ಸಮರ್ಥವಾಗಿ ನಿಭಾಯಿಸುವಲ್ಲಿ ಹಾಗೂ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ತೊಲಗುವವರೆಗೂ ರಾಜ್ಯದ ಜನರಿಗೆ ನೆಮ್ಮದಿ ಇಲ್ಲ ಎನ್ನುವುದು ಗೃಹ ಸಚಿವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

23 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

23 hours ago