Mysore
17
clear sky

Social Media

ಗುರುವಾರ, 22 ಜನವರಿ 2026
Light
Dark

ಹನಿಟ್ರ್ಯಾಪ್‌, ಎಂಎಲ್‌ಸಿ ರಾಜೇಂದ್ರ ಹತ್ಯೆ ಕೇಸ್‌ ತನಿಖೆ| ಈ ವಿಚಾರಗಳ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ: ಜಿ.ಪರಮೇಶ್ವರ್‌

ಬೆಂಗಳೂರು: ಸಹಕಾರ ಸಚಿವ ಕೆ.ಎನ್‌.ರಾಜಣ್ಣರವರ ಹನಿಟ್ರ್ಯಾಪ್‌ ಹಾಗೂ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಹಾಗಾಗಿ ಈ ವಿಚಾರಣೆಗಳ ಬಗ್ಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್‌ ಹಾಗೂ ಆರ್‌.ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ತನಿಖೆ ವೇಳೆ ಯಾವುದೇ ವಿಚಾರಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ಈ ವಿಚಾರಗಳ ತನಿಖೆ ಮುಗಿದು ವರದಿ ಬಂದ ನಂತರ ಅಷ್ಟೇ ಯಾವ ಮಾಹಿತಿ ಬೇಕಾದರರೂ ನೀಡಲು ಸಾಧ್ಯ ಎಂದರು.

Tags:
error: Content is protected !!