ಬೆಂಗಳೂರು: ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್.ರಾಜಣ್ಣ ದೂರು ನೀಡಲಿ, ಬಳಿಕ ತನಿಖೆ ನಡೆಸುತ್ತೇವೆ. ಅವರು ದೂರು ನೀಡದೆ ನಾನೇನು ಮಾಡಲಿ, ನೀವೂ ಎಷ್ಟು ಬಾರಿ ತಿರುಗಿಸಿ, ಮುರುಗಿಸಿ ಕೇಳಿದು ಅಷ್ಟೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಇಂದು(ಮಾರ್ಚ್.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ರಾಜಣ್ಣ ದೂರು ನೀಡದ ಬಗ್ಗೆ ನೀವು ಅವರನ್ನೇ ಕೇಳಬೇಕು. ಅವರಿಗೆ ಯಾವಾಗ ದೂರು ನೀಡಬೇಕು ಎನ್ನಿಸುತ್ತದೆ ಆಗ ದೂರು ನೀಡುತ್ತಾರೆ. ಅವರು ದೂರು ನೀಡಿದ ನಂತರವೇ ನಾವು ತನಿಖೆ ನಡೆಸಲು ಸಾಧ್ಯ. ಆದರೆ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಒತ್ತಡವೂ ಇಲ್ಲ ಎಂದು ಹೇಳಿದರು.
ನನ್ನ ರಾಜ್ಯದ ಗೃಹ ಮಂತ್ರಿಯಾಗಿ ನನ್ನ ಕೆಲಸ ತನಿಖೆ ಘೋಷಣೆ ಮಾಡುವುದಾಗಿದೆ. ಯಾವ ಹಂತದ ತನಿಖೆ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ ಮಾಡುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಫೋನ್ ಟ್ಯಾಪಿಂಗ್ ಬಗ್ಗೆ ಮಾತನಾಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವ ಸಚಿವರಾಗಲಿ ಅಥವಾ ಶಾಸಕರಾಗಲಿ ಯಾವುದೇ ಠಾಣೆಯಲ್ಲೂ ದೂರು ನೀಡಿಲ್ಲ. ಒಂದು ವೇಳೆ ಪೊಲೀಸ್ ಠಾಣೆಗೆ ದೂರು ಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…