ರಾಜ್ಯ

ಮೈಕ್ರೋ ಫೈನಾನ್ಸ್‌ ಬಿಲ್‌ ಸುಗ್ರೀವಾಜ್ಞೆ| ರಾಜ್ಯಪಾಲರು ಸೂಚಿಸಿದರೆ ಬಿಲ್‌ನಲ್ಲಿ ಬದಲಾವಣೆ: ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ತರಲು ತೀರ್ಮಾನಿಸಿದ್ದು, ಇದರಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ನೀಡಿದರೆ ಅದನ್ನು ಬದಲಾವಣೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಸುಗ್ರೀವಾಜ್ಞೆಗೆ ರಾಜ್ಯಪಾಲತಿ ಸಹಿ ಹಾಕುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಜ್ಯಪಾಲರಿಗೆ ಕರಡು ಕಳಿಸಲಾಗಿದೆ. ಅವರು ಇಂದು ಸಹಿ ಹಾಕುವ ನಿರೀಕ್ಷೆ ಇದೆ. ಬಹುಶಃ ರಾಜ್ಯಪಾಲರು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಅಂತಿಮವಾಗಿ ಸಹಿ ಹಾಕುವ ಸಾಧ್ಯತೆಗಳಿವೆ. ಅವರು ಸಹಿ ಹಾಕಿದರೆ ಇಂದೇ ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು ಎಂದರು.

ಇದೇ ವೇಳೆ ಬಿಲ್‌ನಲ್ಲಿ ಕೆಲ ಬದಲಾವಣೆಗೆ ರಾಜ್ಯಪಾಲರು ಸೂಚಿಸಿದ್ದಾರೆಂಬ ಬಗ್ಗೆ ಮಾತನಾಡಿದ ಅವರು, ರಾಜ್ಯಪಾಲರು ಬದಲಾವಣೆಗೆ ಸೂಚನೆ ನೀಡಿರುವ ಕುರಿತು ನನಗೆ ಮಾಹಿತಿ ಇಲ್ಲ. ಈ ಮಾಹಿತಿ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ರವಾನೆಯಾಗಿಲ್ಲ. ಆದರೆ ಅವರು ಕೆಲ ಅಂಶಗಳನ್ನು ಬದಲಾವಣೆ ಮಾಡಬೇಕೆಂದು ಸೂಚಿಸಿದರೆ, ಖಂಡಿತವಾಗಿಯೂ ಬದಲಾಯಿಸಿ ಮತ್ತೊಂದು ಬಾರಿ ರಾಜಭವನಕ್ಕೆ ಕಳುಹಿಸುತ್ತೇವೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

4 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

6 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago