ಬೆಂಗಳೂರು: ಈ ಬಾರಿಯ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಸಾರ್ವಜನಿಕರು ಶಾಂತಿಯುತವಾಗಿ ಹೊಸ ವರ್ಷಾಚರಣೆಯನ್ನು ಸಂಭ್ರಮಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.1) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾತ್ರಿ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಂಡ ಸಾರ್ವಜನಿಕರು, ಶಾಂತಿಯುತವಾಗಿ ನೂತನ ವರ್ಷವನ್ನು ಆಚರಿಸಿದ್ದಾರೆ. ಅಲ್ಲದೇ ಸಂಭ್ರಮಾಚರಣೆಯ ವೇಳೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಹೀಗಾಗಿ ರಾಜ್ಯದ ಯುವಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ಪೊಲೀಸರು ಉತ್ತಮ ಭದ್ರತೆಯನ್ನು ವಹಿಸಿದ್ದರು ಅವರಿಗೂ ಸಹ ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ಡಿ.ಕೆ.ಸುರೇಶ್ ಅವರು ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಪೊಲೀಸರೂ ಕೂಡ ವಿಚಾರಣೆ ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರ ಇದರಲ್ಲಿ ಭಾಗಿಯಾಗುವುದಿಲ್ಲ ಎಂದಿದ್ದಾರೆ.





