ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಕದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಲಪಾಡ್ ಅವರಿಗೆ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಪೊಲೀಸರು ಬಿಟ್ ಕಾಯಿನ್ ಪ್ರಕರಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಅಲ್ಲದೇ ನಲಪಾಡ್ ಮತ್ತು ಹ್ಯಾಕರ್ ಶ್ರೀಕಿ ಮಧ್ಯೆ ನಡೆದಿರುವ ವ್ಯವಹಾರದ ಸಂಬಂಧವಾಗಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದ ಬಗ್ಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಬಿಲ್‌ನ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಿದ್ದೇವೆ. ಆ ಬಿಲ್‌ನ ಅನುಮೋದನೆಗೆ ರಾಜ್ಯಪಾಲರ ಸಹಿ ಆಗಿರಬೇಕು. ಒಂದು ವೇಳೆ ಬದಲಾವಣೆಗೆ ಸೂಚನೆ ನೀಡಿದರೆ ಅದನ್ನು ಸರಿ ಮಾಡುತ್ತೇವೆ ಎಂದರು.





