ರಾಜ್ಯ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ| ಸಿಬಿಐ ತನಿಖೆಯಲ್ಲಿ ಸಚಿವರಿಬ್ಬರ ಬಗ್ಗೆ ತಿಳಿಯಲಿದೆ: ಜಿ.ಪರಮೇಶ್ವರ್‌

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತದೆ, ಅದರಲ್ಲಿಯೇ ಆ ಇಬ್ಬರ ಸಚಿವರ ಬಗ್ಗೆ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು(ಮಾರ್ಚ್.10) ಶಾಸಕ ಸುನೀಲ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ ಜಿ.ಪರಮೇಶ್ವರ್‌ ಅವರು, ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಪ್ರಕರಣಕ್ಕೂ ರಾಜ್ಯ ಪೊಲೀಸ್‌ ಇಲಾಖೆಗೂ ಸಂಬಂಧವೇ ಇಲ್ಲ. ರನ್ಯಾ ಅವರನ್ನು ಬಂಧಿಸಿರುವುದು ಆದಾಯ ಗುಪ್ತಚರ ನಿರ್ದೇನಾಲಯ. ಹೀಗಾಗಿ ಆ ಇಲಾಖೆಯವರೇ ಸಿಬಿಐ ತನಿಖೆಗೂ ದೂರು ನೀಡಿದ್ದಾರೆ ಎಂದರು.

ಇನ್ನು ರಾಜ್ಯದ ಇಬ್ಬರು ಸಚಿವರ ಕೈವಾಡವಿದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದರ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ. ಡಿಆರ್‌ಐ ತನಿಖಾ ತಂಡವೂ ನಮ್ಮ ಪೊಲೀಸ್‌ ಅಧಿಕಾರಿಗಳಿಗೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಈ ಪ್ರಕರಣದಲ್ಲಿ ನಾವು ಯಾವ ಪ್ರಭಾವಕ್ಕೂ ಒಳಗಾಗಿಲ್ಲ. ಸಚಿವರಿಬ್ಬರ ಕೈವಾಡ ಇದೇ ಎಂದರೆ ಅದು ಯಾವ ಸಚಿವರೆಂದು ಸಿಬಿಐ ತನಿಖೆಯಲ್ಲಿಯೇ ಗೊತ್ತಾಗಲಿದೆ ಎಂದು ಹೇಳಿದರು.

ಶಾಸಕ ಸುನೀಲ್‌ ಕುಮಾರ್‌ ಅವರ ಪ್ರಶ್ನೆ ಏನು?

ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದಲ್ಲಿ ಸಚಿವರಿಬ್ಬರ ಕೈವಾಡವಿದೆ. ಅದು ಯಾವ ಸಚಿವರೆಂದು ತನಿಖೆ ಮಾಡಲು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಬೇಕು. ಅಲ್ಲದೇ ಆ ನಟಿ ವಿದೇಶಕ್ಕೆ ಹೋಗುವಾಗ ಯಾವುದೇ ತಪಾಸಣೆ ಇಲ್ಲದೇ, ಅಧಿಕಾರಿಗಳೇ ರಕ್ಷಣೆ ನೀಡುತ್ತಿದ್ದರು ಅಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

49 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

3 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago