ರಾಜ್ಯ

ವಿನಯ್‌ ಆತ್ಮಹತ್ಯೆ ಪ್ರಕರಣ| ಕಾನೂನು ಎಲ್ಲರಿಗೂ ಒಂದೇ: ಜಿ.ಪರಮೇಶ್ವರ್‌

ಬೆಂಗಳೂರು: ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಅಂತೆಯೇ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿಯೂ ಎ.ಎಸ್‌.ಪೊನ್ನಣ್ಣನಿಗೆ ಮತ್ತು ಮಂಥರ್‌ ಗೌಡ ಅವರಿಗೂ ಒಂದೇ ಕಾನೂನುನ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ವಿನಯ್‌ ಸೋಮಯ್ಯ ಡೆತ್‌ನೋಟ್‌ನಲ್ಲಿ ಕಾಂಗ್ರೆಸ್‌ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಮಂಥರ್‌ ಗೌಡ ಹೆಸರು ಉಲ್ಲೇಖವಾಗಿರುವ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಭಾರತ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಹಾಗಾಗಿ ಕಾನೂನಿನ ಅಡಿಯಲ್ಲಿ ಏನೇನೂ ಕ್ರಮ ತೆಗೆದುಕೊಳ್ಳಬೇಕೆಂಬುದು ಇದೆಯೋ ಅಂತೆಯೇ ಪೊಲೀಸ್‌ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ವಿನಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಮತ್ತು ಬೆಂಗಳೂರಿನಲ್ಲಿಯೂ ಎಫ್‌ಐಆರ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸಮಗ್ರ ತನಿಖೆಯಾದ ಬಳಿಕ ಇವರಿಬ್ಬರೂ ವಿನಯ್‌ ಆತ್ಮಹತ್ಯೆಗೆ ಕಾರಣವಾಗಿದ್ದರೆಂದು ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಿಜೆಪಿಯವರು ಎಲ್ಲವನ್ನೂ ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾರೆ. ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಫೆಬ್ರವರಿಯಲ್ಲಿ ಆಗಿರುವ ಘಟನೆ ವಿನಯ್‌ ಆತ್ಮಹತ್ಯೆ ಮಾಡಿಕೊಂಡ ಮೇಲೆ ಬೆಳಕಿಗೆ ಬಂದಿದೆ. ಆ ಬಗ್ಗೆಯೂ ತನಿಖೆಯಾಗಬೇಕು. ಆದರೆ ಶಾಸಕರ ಹೆಸರು ಹೇಳಿದ ತಕ್ಷಣ ಅದನ್ನು ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ವಾಟ್ಸ್‌ಆಪ್‌ ಅನ್ನು ಪರಿಶೀಲನೆ ಮಾಡಿದಾಗ ಏನಾದರು ಪಾತ್ರ ಇದೆಯೆಂದು ಕಂಡರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಮೃತ ವಿನಯ್‌ ಅವರ ಡೆತ್‌ನೋಟ್‌ವಿಲ್ಲವೆಂದು ಹೇಳುತ್ತಾರೆ. ಅಲ್ಲದೇ ಅವರೇ ವಾಟ್ಸ್‌ಆಪ್‌ನಲಿ ಶೇರ್‌ ಮಾಡಿದ್ದಾರೆ ಎಂದು ಮೊದಲು ಸಾಬೀತಾಗಬೇಕು. ಇನ್ನು ಈ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡೋಕೆ ಅವಕಾಶ ಇಲ್ಲ. ಒಂದು ವೇಳೆ ನಿರ್ಲಕ್ಷ್ಯ ಮಾಡಿದರೆ ಅವರ ಮೇಲೆ ಕ್ರಮ ಆಗುತ್ತದೆ. ಹೀಗಾಗಿ ಸಂಪೂರ್ಣ ತನಿಖೆ ಮಾಡಿ ವರದಿ ನೀಡಬೇಕು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago