ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟು ಹಂಚಿಕೆ ಹಗರಣದಲ್ಲಿ ಪ್ರಾಷಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಬಗ್ಗೆ ಪರಮೇಶ್ವರ್ ಮಾತನಾಡಿದ್ದಾರೆ.
ರಾಜ್ಯಪಾಲರು ಸಚಿವ ಸಂಪುಟ ಸಲಹೆ ಕೇಳಿದ ಮೇಲೆ ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವು. ಶೋಕಾಷ್ ನೋಟಿಸ್‌ಗೆ ವಿಸ್ತಾರವಾಗಿ ಮಾಹಿತಿ ನೀಡಿಯೂ ಅವರು ವಿಚಾರಣೆಗೆ ಅನುಮತಿ ನೀಡಿದ್ದಾರೆ. ಈ ಬಗ್ಗೆ ಕಾನೂನಾತ್ಮ ಹೋರಾಟ ಮಾಡುತ್ತೇವೆ.
ಅವರ ಮೇಲೆ ಒಂದು ವಿಶ್ವಾಸವಿತ್ತು. ಅವರು ಕೊಡುವುದಿಲ್ಲ ಎಂದು ಭಾವಿಸಿದ್ದೇವು. ಆದರೆ ಅವರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸ್ವಾಭಾವಿಕವಾಗಿಯೇ ರಾಜ್ಯಪಾಲರ ಮೇಲಿನ ಕೇಂದ್ರದ ಒತ್ತಡ ಕಾಣಿಸುತ್ತದೆ.
ಸಿಎಂ ಸಿದ್ದರಾಮಯ್ಯ ಅವರು ಲೀಗಲ್ ಟೀಂ ಜೊತೆಯಲ್ಲಿ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ. ನಾವು ಈಗಾಗಲೇ ಹೇಳಿದಂತೆ ಎಲ್ಲಾ ರೀತಿಯ ಹೋರಾಟಕ್ಕೂ ಸಿದ್ದವಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.





