ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳ ತಡೆಗೆ ಸರ್ಕಾರದಿಂದ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.24) ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬ್ಯಾಂಕ್‌ಗಳಲ್ಲಿ ಸಾಲ ನೀಡಿದವರಿಗೆ ಹಾಗೂ ಪಡೆದವರು ಇಬ್ಬರಿಗೂ ಕಾನೂನು ಇದೆ. ಅಂತೆಯೇ
ಬ್ಯಾಂಕ್ ನಿಯಮಗಳ ಪ್ರಕಾರ ರಿಕವರಿ ಮಾಡೋಕೆ ನಿಯಮವಿದೆ. ಹೀಗಾಗಿ ಮೈಕ್ರೋ ಫೈನಾನ್ಸ್ ಕಂಪೆನಿಯಿಂದ ಸಾಲ ಪಡೆದವರ ರಕ್ಷಣೆಗಾಗಿ ಕಾನೂನು ಇದೆ ಎಂದರು.
ಮೈಕ್ರೋ ಫೈನಾನ್ಸ್ ಕಂಪೆನಿಯ ಸಾಲ ವಸೂಲಿ ವಿಚಾರದಲ್ಲಿ ಸೂಕ್ತ ಕಾನೂನು ಇಲ್ಲ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದ ಆತ್ಯಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇನ್ನೂ ಈ ವಿಚಾರಕ್ಕೆ ಸಂಬಂಧಿದಂತೆ ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸೂಕ್ತ ತೀರ್ಮಾನ ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.