ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವೆ. ಒಂದು ವೇಳೆ ಅವರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದರೇ ನಾನು ಕಾನೂನು ಹೋರಾಟ ಮಾಡಲು ಸಿದ್ದವಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ನೀಡಿದರೆ ನಾವು ಕಾನೂನು ಹೋರಾಟ ಮಾಡುತ್ತೇವೆ. ಕಾನೂನು ಹೋರಾಟ ಮುಂದುವರಿದ ಬಳಿಕ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.
ಹತ್ತಾರು ಪ್ರಕರಣಗಳು ರಾಜ್ಯಪಾಲರ ಟೇಬಲ್ ಮೇಲಿದೆ. ಆದರೂ ಅವರು ಮುಡಾ ವಿಚಾರದಲ್ಲಿ ತರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಕೇವಲ ಒಂದೇ ದಿನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದರ ಹಿಂದಿನ ಉದ್ದೇಶದ ಬಗ್ಗೆ ಕೇವಲ ರಾಜ್ಯಪಾಲರಷ್ಟೆ ಹೇಳಬೇಕು ಎಂದರು.
ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಡೆ ಏನೆಂಬುದನ್ನು ಕಾದು ನೋಡುತ್ತೇವೆ. ಬಳಿಕ ಕಾನೂನು ಹೋರಾಟ ಮೂಲಕ ಉತ್ತರ ನೀಡುವುದಾಗಿ ತಿಳಿಸಿದರು.





