ರಾಜ್ಯ

ಮಹದೇವಪ್ಪ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು, ತಿಂಡಿಗೂ-ಊಟಕ್ಕೂ ಹೋಗಬಾರದಾ?: ಜಿ.ಪರಮೇಶ್ವರ್‌

ಬೆಂಗಳೂರು: ಸಚಿವ ಎಚ್‌.ಸಿ.ಮಹದೇವಪ್ಪ ಅವರು ತಮ್ಮ ಮನೆಗೆ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅದರಲ್ಲಿ ವಿಶೇಷವೇನಿಲ್ಲ, ಸಚಿವರುಗಳು ಒಟ್ಟಿಗೆ ತಿಂಡಿಗೂ ಮತ್ತು ಊಟಕ್ಕೂ ಹೋಗಬಾರದಾ? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಮತ್ತಷ್ಟು ಬೆಳವಣಿಗೆ ನಡೆಯುತ್ತಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ರಾಜ್ಯದಲ್ಲಿರುವಾಗಲೇ ಇಂದು ಗೃಹ ಸಚಿವ ಪರಮೇಶ್ವರ್‌ ಹಾಗೂ ಸಚಿವ ಎಚ್‌.ಸಿ.ಮಹದೇವಪ್ಪ ಅವರ ಭೇಟಿ ಕುತೂಹಲಕರ ಮೂಡಿಸಿದೆ. ಆದರೆ ಎಚ್.ಸಿ.ಮಹದೇವಪ್ಪ ಅವರು ಗೃಹ ಸಚಿವರ ಮನೆಯಿಂದ ತೆರಳುವಾಗ ನಾವು ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನಗರದ ಸದಾಶಿವನಗರದಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹದೇವಪ್ಪ ಅವರು ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅವರು ನಮ್ಮ ಮನೆಗೆ ಅನೇಕ ಬಾರಿ ತಮ್ಮ ಮನೆಗೆ ಭೇಟಿ ನೀಡುತ್ತಿರುತ್ತಾರೆ. ನಾವು ಅವರ ಮನೆಗೆ ಹೋಗುತ್ತೇವೆ, ಅವರು ಬರುತ್ತಾರೆ. ತಿಂಡಿಗೂ ಮತ್ತು ಊಟಕ್ಕೂ ಸಚಿವರು ಮನೆಗೆ ಹೋಗಬಾರದಾ? ಅದರಲ್ಲಿ ವಿಶೇಷ ಏನಿದೆ. ಅವರು ತಮ್ಮ ನಿವಾಸಕ್ಕೆ ಬಂದು ಯಾವುದೇ ಚರ್ಚೆ ನಡೆಸಿಲ್ಲ ಎಂದರು.

ಸಚಿವರು ಅಂದಮೇಲೆ ಒಬ್ಬರ ಮನೆಗೆ, ಮತ್ತೊಬ್ಬರು ತಿಂಡಿಗೋ ಅಥವಾ ಊಟಕ್ಕೋ ಹೋಗುವುದು ಸಹಜ. ಆದರೆ ಈ ವೇಳೆ ಚರ್ಚೆ ನಡೆಯುತ್ತವೆ ಎಂದರೆ ಅದು ಸುಳ್ಳು. ಬೇರೆ ಯಾವುದಕ್ಕೂ ಇದಕ್ಕೂ ಸಂಬಂಧ ಇಲ್ಲ. ನಮ್ಮ ವೈಯಕ್ತಿಕ ಭೇಟಿಗಳನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

28 mins ago

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

55 mins ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

1 hour ago

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

4 hours ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

4 hours ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

4 hours ago