ಬೆಂಗಳೂರು: ನನಗೆ ಯಾರು ಎಸ್‌ಸಿ,ಎಸ್‌ಟಿ ಸಮಾವೇಶದ ಕುರಿತು ಚರ್ಚೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ಆದರೆ ಸಭೆ ಮಾಡಿದರೆ ಸಹಿಸುವುದಿಲ್ಲ ಎಂದು ಯಾರಾದರೂ ಹೇಳಿದರೆ ಅದಕ್ಕೆ ಸರಿಯಾದ ಉತ್ತರ ನೀಡುವ ಶಕ್ತಿ ನಮಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಆ ರೀತಿಯಾಗಿ ಯಾರಾದರೂ ಹೇಳಿದರೆ, ನಾವು ತಲೆ ಕೆಡಿಸಿಕೊಳ್ಳುವುದು ಇಲ್ಲ. ವಿಧಾನಸಭೆ ಚುನಾವಣೆಗೂ ಮೊದಲು ಚಿತ್ರದುರ್ಗದಲ್ಲಿ ಎಸ್‌ಸಿ,ಎಸ್‌ಟಿ ಸಮಾವೇಶ ಮಾಡಲಾಗಿತ್ತು ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅನೇಕ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿಕೊಂಡಿದ್ದೆವು. ಚಿತ್ರದುರ್ಗ ನಿರ್ಣಯವೆಂದು ಹೆಸರು ಕೊಟ್ಟು ಬೇಡಿಕೆಗಳನ್ನು ಇಟ್ಟಿದ್ದೆವು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಹೀಗಾಗಿ ಸರ್ಕಾರ ಅನೇಕ ಭರವಸೆಗಳನ್ನು ಈಡೇರಿಸುವ ಕಾರ್ಯವನ್ನು ಮಾಡಿದೆ ಎಂದು ಹೇಳಿದ್ದಾರೆ.
ಇನ್ನೂ ಕೇಂದ್ರ ಸರ್ಕಾರದಿಂದ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ ಬರುತ್ತಿಲ್ಲ. ಕೇಂದ್ರದಿಂದ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದ ಪಾಲು ಸಹ ರಾಜ್ಯಕ್ಕೆ ಬರುತ್ತಿಲ್ಲ. ಈ ಬಗ್ಗೆ ಎಲ್ಲವನ್ನು ಚರ್ಚೆ ಮಾಡಬೇಕಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ನಿಟ್ಟಿನಲ್ಲಿ ಸಭೆ ಸೇರಲು ಆದರೆ ಈ ವಿಚಾರವನ್ನು ಹೈಕಮಾಂಡ್ ನಾಯಕರ ಗಮನಕ್ಕೆ ತಂದಿರಲಿಲ್ಲ. ಏಕೆಂದರೆ ನಮ್ಮದೆ ಆಂತರಿಕ ವಿಚಾರ ಆಗಿರುವುದರಿಂದ ತಿಳಿಸುವ ಅವಶ್ಯಕತೆ ಇಲ್ಲವೆಂದು ಭಾವಿಸಿ ಹೇಳಿರಲಿಲ್ಲ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರದ ನಿರ್ಧಾರ ಹಾಗೂ ಪಕ್ಷದ ವಿಚಾರಗಳು ಬಂದಾಗ ಮಾತ್ರ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಗಮನಕ್ಕೆ ಹೋಗುತ್ತವೆ. ಈ ಸಮಾವೇಶ ರಾಜಕೀಯ ಪ್ರೇರಿತ ಅಥವಾ ರಾಜಕೀಯಕ್ಕಾಗಿ ನಡೆಸುತ್ತಿರುವ ಸಮಾವೇಶವಲ್ಲ. ಸುರ್ಜೇವಾಲಾ ಅವರು ನನಗೆ ಕರೆ ಮಾಡಿ ಸಮಾವೇಶದಲ್ಲಿ ಪಾಲ್ಗೋಳ್ಳಬೇಕೆಂದು ತಿಳಿಸಿದ್ದಾರೆ. ಆದರೆ ಈಗ ಭಾಗವಹಿಸಲು ಅವರಿಗೆ ಸಮಯವಿಲ್ಲವೆಂದು ಹೇಳಿದ್ದಾರೆ. ಹೀಗಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದರುವ ಕಾರಣ ಸಮಾವೇಶವನ್ನು ಮುಂದೂಡಿದ್ದೇವೆ ಅಷ್ಟೇ. ಅದನ್ನು ರದ್ದುಪಡಿಸಿಲ್ಲ ಎಂದು ಹೇಳಿದ್ದಾರೆ.
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಾರ್ಥಕ ಕಾರ್ಯ ಡಾ. ಮುಳ್ಳೂರು ನಂಜುಂಡಸ್ವಾಮಿ ಮೈ ಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ…
ಉನ್ನತ ಶಿಕ್ಷಣ ದುಬಾರಿಯಾಗುತ್ತಿರುವುದು ದಲಿತ ವಿದ್ಯಾರ್ಥಿಗಳಿಗೆ ಮಾರಕವಾಗುತ್ತಿದೆ ನಾ. ದಿವಾಕರ ದಿನಗೂಲಿ ಕಾರ್ಮಿಕರ ಮಗ ಅತುಲ್ ಕುಮಾರ್ ಪರಿಶಿಷ್ಟ ಜಾತಿಗೆ…
ಮೈಸೂರಿನ ಕುವೆಂಪುನಗರದ ಅಕ್ಷಯ ಭಂಡಾರ್ ಸಮೀಪದ ಬಸ್ ತಂಗುದಾಣಕ್ಕೆ ಶೆಲ್ಟರ್ ಇಲ್ಲದೆ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ…
ದೇಶದ ಬೆನ್ನೆಲುಬು ರೈತ. ಇಡೀ ನಾಡಿಗೆ ಅನ್ನ ಕೊಡುವ ರೈತರ ದಿನಾಚರಣೆಯನ್ನು ಸರ್ಕಾರ ಹೆಸರಿಗಷ್ಟೇ ಆಚರಣೆ ಮಾಡುತ್ತಿದೆಯೇ ವಿನಾ ರೈತರಿಗೆ…
ಗುಂಡ್ಲುಪೇಟೆ ತಾಲ್ಲೂಕಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ನಿತ್ಯ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಸ್ ನಿಲ್ದಾಣಕ್ಕೆ ರಾಜ್ಯ…
ಮಂಡ್ಯ ಜಿಲ್ಲೆಯ 968 ಕೆರೆಗಳ ಪೈಕಿ 550 ಕೆರೆಗಳು ಈಗಲೂ ಭರ್ತಿ ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಕಳೆದ ಮೂರ‍್ನಾಲ್ಕು ತಿಂಗಳಿಂದ…