ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್.ರಾಜಣ್ಣ ಅವರು ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.23) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ವಿಚಾರವಾಗಿ ರಾಜಣ್ಣ ಅವರು ಇನ್ನೂ ದೂರು ನೀಡಿಲ್ಲ. ಅವರು ದೂರು ನೀಡಿದ ಕೂಡಲೇ ತನಿಖೆಗೆ ವಹಿಸುತ್ತೇವೆ. ಅಲ್ಲದೇ ನಾನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಉನ್ನತ ಮಟ್ಟದ ತನಿಖೆಗೆ ಅಂದರೆ ಯಾವ ತನಿಖೆಗೆ ಈ ಕೇಸ್ ಅನ್ನು ವಹಿಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
ರಾಜ್ಯ ಸರ್ಕಾರ ಹನಿಟ್ರ್ಯಾಪ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜಣ್ಣ ಅವರು ಇಷ್ಟೊತ್ತಿಗೆ ದೂರು ನೀಡಿದ್ದರೆ ಯಾವ ಸ್ವರೂಪದ ತನಿಖೆ ಎಂದು ಘೋಷಣೆ ಮಾಡುತ್ತಿದ್ದೇವು. ಆದರೆ ಈಗಾಗಲೇ ಯಾವ ತನಿಖೆಗೆ ನೀಡಬೇಕೆಂದು ಪ್ರಾಥಮಿಕವಾಗಿ ಅಂದುಕೊಂಡಿದ್ದೇವೆ. ಹಾಗಾಗಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿದ ಬಳಿಕ ಯಾವ ಮಟ್ಟದ ತನಿಖೆ ಎಂದು ಪ್ರಕಟಿಸುತ್ತೇವೆ ಎಂದು ಹೇಳಿದರು.
ಇನ್ನೂ ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂಬ ಬಿಜೆಪಿ ಆಗ್ರಹದ ಬಗ್ಗೆ ಮಾತನಾಡಿದ ಅವರು, ನಾವು ನಮ್ಮದೇ ರೀತಿಯಲ್ಲಿ ಪರಿಶೀಲಿಸಿ ನಿರ್ಧಾರ ಮಾಡ್ತೇವೆ. ಇಷ್ಟು ದೊಡ್ಡ ಘಟನೆ ನಡೆದಿದೆ, ವಿಧಾನಸೌಧದಲ್ಲಿ ಚರ್ಚೆ ಆಗಿದೆ. ನಡೆಯದಿರೋದೆಲ್ಲ ನಡೆದಿದೆ. ಅಂತಹದರಲ್ಲಿ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಅಂದರೆ ಆಗಲ್ಲ ಎಂದರು.
ಇದೇ ಸಂದರ್ಭದಲ್ಲಿ ಸದನದಲ್ಲಿ ಏಕಾಏಕಿ ರಾಜಣ್ಣ ಮಾತಾಡಿದ್ದಕ್ಕೆ ಹೈಕಮಾಂಡ್ ಬೇಸರವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ನೋಡಿಕೊಳ್ಳುತ್ತಾರೆ. ಹಾಗಾಗಿ ಈ ಕುರಿತು ನನಗೆ ಅಷ್ಟು ಗೊತ್ತಿಲ್ಲ ಎಂದು ತಿಳಿಸಿದರು.
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…