ಗದಗ: ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) ಎಂಬಿಬಿಎಸ್ ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಎಂಬಿಬಿಎಸ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಕನ್ನಡ, ತಮಿಳು, ತೆಲುಗು, ಹಿಂದಿ ಚಿತ್ರ ಗೀತೆಗಳಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ರೀಲ್ಸ್‌ಗಳನ್ನು ನೋಡಿ ಕೆಲವರು ಇಷ್ಟಪಟ್ಟರೆ, ಇನ್ನು ಕೆಲವರು ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ವಾ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಎಂಬಿಬಿಎಸ್ ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಅನುಮತಿ ಪಡೆಯದೇ ಜಿಲ್ಲಾ ಆಸ್ಪತ್ರೆಯ ವಿವಿಧೆಡೆ ರೀಲ್ಸ್ ಮಾಡಿದ್ದಾರೆ. ಇದರ ಬಗ್ಗೆ ವಿಚಾರಿಸಿದಾಗ, ಏಪ್ರಿಲ್‌ನಲ್ಲಿ ಪದವಿ ಪೂರ್ಣಗೊಳ್ಳುವ ಸಂಭ್ರಮದಲ್ಲಿ ಯಾರಿಗೂ ತೊಂದರೆ ಆಗದಂತೆ ರೀಲ್ಸ್ ಮಾಡಿರುವುದಾಗಿ ತಿಳಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ್ದು ತಪ್ಪು’ ಗ್ರಾಜ್ಯುಯೇಷನ್ ಡೇ ಮಾಡದಿರಲು ನಿರ್ಧರಿಸಲಾಗಿದೆ’ ಎಂದು ಡಾ. ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…