actor ganpa
ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ನಟ ಸಂತೋಷ್ ಬಾಲರಾಜ್ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸಂತೋಷ್ ಬಾಲರಾಜ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸಂತೋಷ್ ಬಾಲರಾಜ್ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತೋಷ್ ಬಾಲರಾಜ್ ಕರಿಯಾ-2, ಕೆಂಪ, ಗಣಪ, ಸತ್ಯಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕ ನಟಗಾಗಿ ಅಭಿನಯಿಸಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ಕಲಾವಿದರು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…