ರಾಜ್ಯ

ಗಣಪ ಸಿನಿಮಾ ಖ್ಯಾತಿಯ ನಟ ಸಂತೋಷ್‌ ಬಾಲರಾಜ್‌ಗೆ ಜಾಂಡಿಸ್: ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸಂತೋಷ್‌ ಬಾಲರಾಜ್‌ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್‌ ಬಾಲರಾಜ್‌ ಅವರ ಪುತ್ರ ನಟ ಸಂತೋಷ್‌ ಬಾಲರಾಜ್‌ ಅವರು ಜಾಂಡಿಸ್‌ನಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸಂತೋಷ್‌ ಬಾಲರಾಜ್‌ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸಂತೋಷ್‌ ಬಾಲರಾಜ್‌ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂತೋಷ್‌ ಬಾಲರಾಜ್‌ ಕರಿಯಾ-2, ಕೆಂಪ, ಗಣಪ, ಸತ್ಯಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕ ನಟಗಾಗಿ ಅಭಿನಯಿಸಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ಕಲಾವಿದರು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

5 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

11 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

12 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

13 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

13 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

19 hours ago