ರಾಜ್ಯ

ಸಿಎಂ ನೇತೃತ್ವದಲ್ಲಿ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಸಭೆ : ಮುಖ್ಯಾಂಶ ಹೀಗಿವೆ

ಬೆಂಗಳೂರು : ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಸಭೆಯ ಮುಖ್ಯಾಂಶಗಳು ಹೀಗಿವೆ….

• ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು.

• ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಕುರಿತಾಗಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗುವುದು.

• ಗಾಂಧೀಜಿ ಅವರು ಭೇಟಿ ನೀಡಿರುವ ಸ್ಮರಣಾರ್ಥ ರಾಜ್ಯದ 120 ಸ್ಥಳಗಳಲ್ಲಿ ಸ್ತಂಭಗಳನ್ನು ನವೆಂಬರ್ ಕೊನೆಯ ಒಳಗಾಗಿ ನಿರ್ಮಿಸುವುದು.

• ಗಾಂಧಿ ಭಾರತ ಅಂಗವಾಗಿ ರಾಜ್ಯಾದ್ಯಂತ ಜ್ಯೋತಿ ಯಾತ್ರೆಗಳನ್ನು ಆಯೋಜಿಸಲಾಗುವುದು. ಮಹಾತ್ಮಾ ಗಾಂಧೀಜಿ ಅವರ ಧ್ಯಾನಸ್ಥ ಭಂಗಿಯ ಭಾವಚಿತ್ರ ಹಾಗೂ ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳನ್ನು ಎಲ್ಲಾ ಶಾಲೆಗಳಲ್ಲಿ ಬರೆದು ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು.

• ರಂಗಾಯಣದ ವತಿಯಿಂದ ಗಾಂಧಿ ವರ್ಸಸ್ ಗಾಂಧಿ, ಪಾಪು-ಬಾಪು ಹಾಗೂ ಮಹಾತ್ಮರ ಬರುವಿಗಾಗಿ ಎಂಬ ಮೂರು ನಾಟಕಗಳನ್ನು ನಿರ್ಮಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗಿದೆ.

• ರಾಜ್ಯದ 16 ಜಿಲ್ಲೆಗಳಲ್ಲಿ ಈಗಾಗಲೇ ಗಾಂಧಿ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ನಿವೇಶನ ಇನ್ನೂ ಸಿಗದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ನಿರಂತರವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಬೇಕು.

ಸಭೆಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಆರ್.ವಿ.ದೇಶಪಾಂಡೆ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಶತಮಾನೋತ್ಸವ ಸಮಿತಿಯ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

15 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

23 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

1 hour ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

1 hour ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

1 hour ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

1 hour ago