ರಾಜ್ಯ

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹಾತ್ಮಾ ಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು.

ಪಂಚಾಯತಿಗಳಿಗೆ ಮಹಾತ್ಮಾ ಗಾಂಧೀಜಿ ಹೆಸರು
ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತ್ಮಾಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು.

ಗಾಂಧೀಜಿಯವರ ಕೊಡುಗೆಯನ್ನು ಇಡೀ ದೇಶ ಸ್ಮರಿಸುತ್ತದೆ
ಇಂತಹ ಮಹಾನ್ ಚೇತನ ಗುಂಡೇಟಿಗೆ ಬಲಿಯಾಗಿ ನಮ್ಮನ್ನ ಅಗಲಿದ್ದಾರೆ. ಅವರ ಅಭಿಮಾನಿಯೊಬ್ಬರು- ಗಾಂಧೀಜಿಯವರು 100 ವರ್ಷ ಬದುಕಬೇಕೆಂದು ಹಾರೈಸಿದ್ದಕ್ಕೆ, ಗಾಂಧೀಜಿಯವರು ‘’ನಾನು 125 ವರ್ಷಗಳು ದೇಶಕ್ಕಾಗಿ ಬದುಕಲಿಚ್ಛಿಸುತ್ತೇನೆ’ ಎಂದು ಉತ್ತರಿಸಿದ್ದರು. ಇಡೀ ದೇಶ ಅವರ ಕೊಡುಗೆಯನ್ನು ಸ್ಮರಿಸುತ್ತದೆ ಎಂದರು.

ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರದ್ದು
ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

2 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

2 hours ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

2 hours ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

2 hours ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

2 hours ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

16 hours ago