ಮೈಸೂರು: ಇಂದು ಎಲ್ಲೆಡೆ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.
ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ. ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ ಎಂದು ತಿಳಿಸಿದ್ದಾರೆ.