ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕುಮಾರಕೃಪಾ ಅತಿಥಿ ಗೃಹಕ್ಕೆ ‘ಗಂಗಾ’ ಎಂದು ಮರುನಾಮಕರಣ ಮಾಡಿರುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.
ಸುಮಾರು 160 ವರ್ಷಗಳ ಇತಿಹಾಸವಿರುವ ಈ ಕಟ್ಟಡವನ್ನು ನವೀಕರಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ನಿವಾಸವನ್ನಾಗಿ ಮಾಡಲಾಗಿದೆ. ನೂತನ ನಿವಾಸದಲ್ಲಿ ಸಿಎಂ ದಂಪತಿ ಸಚಿವರು, ಶಾಸಕರು ಮತ್ತು ಸಂಸದರು ಸೇರಿದಂತೆ ಸುಮಾರು 500 ಗಣ್ಯರಿಗೆ ಔತಣಕೂಟ ಏರ್ಪಡಿಸಿದ್ದರು. ಇದೇ ವೇಳೆ ನಿವಾಸದ ಮುಂದೆ ವಾಟಾಳ್ ನಾಗರಾಜ್ ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟಿಸಿದರು.
ಹೆಸರು ಬದಲಾವಣೆ ಮತ್ತು ಕಟ್ಟಡದ ನವೀಕರಣವನ್ನು ಖಂಡಿಸಿದ ವಾಟಾಳ್, ಕುಮಾರಕೃಪಾ ಅತಿಥಿ ಗೃಹವನ್ನು ಉಳಿಸಲು ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಹೇಳಿದರು. ಕರ್ನಾಟಕ ಬಂದ್ಗೆ ಕರೆ ನೀಡುವುದಾಗಿಯೂ ಎಚ್ಚರಿಕೆ ನೀಡಿದರು.




