ಬೆಂಗಳೂರು : ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ ಈಗ ಸಾಮಾನ್ಯ ಜನರ ಕೈಗೆ ಎಟುಕದಷ್ಟು ದುಬಾರಿಯಾಗಿದೆ.
ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ದೆಹಲಿ, ಲಕ್ನೋ, ಭೋಪಾಲ್, ಪಾಟ್ನಾ ಸೇರಿದಂತೆ ದೇಶದ ಬಹುತೇಕ ನಗರಗಳಲ್ಲಿ ಬೆಳ್ಳುಳ್ಳಿ ಕೆಜಿಗೆ 400 ರಿಂದ 600 ರೂಪಾಯಿಗೆ ಮಾರಾಟವಾಗುತ್ತಿದೆ. 15 ದಿನಗಳ ಹಿಂದೆ ಬೆಳ್ಳುಳ್ಳಿ ಬೆಲೆ ಕೆಜಿಗೆ 200 ರೂಪಾಯಿ ಇತ್ತು.
ಹೊಸ ಬೆಳೆ ಬರಲು ವಿಳಂಬ ಹಾಗೂ ಇಳುವರಿ ಕುಂಠಿತವಾಗಿರುವ ಕಾರಣ ಬೆಳ್ಳುಳ್ಳಿ ಬೆಲೆ ಹೆಚ್ಚಾಗಿದೆ. ಬದಲಾಗುತ್ತಿರುವ ಹವಾಮಾನವು ಬೆಳ್ಳುಳ್ಳಿ ಬೆಳೆಗಳಿಗೆ ಹಾನಿಯನ್ನುಂಟು ಮಾಡಿದೆ. ಏಕಾಏಕಿ ಸುರಿದ ಭಾರೀ ಮಳೆಯಿಂದ ಬೆಳೆ ಸಾಕಷ್ಟು ನಷ್ಟವಾಗಿವೆ. ಬೆಳೆ ಹಾನಿಯಿಂದಾಗಿ ಮಾರುಕಟ್ಟೆಗೆ ಸಾಕಷ್ಟು ಪ್ರಮಾಣದಲ್ಲಿ ಬೆಳ್ಳುಳ್ಳಿ ಪೂರೈಕೆಯಾಗುತ್ತಿಲ್ಲ.
ದಾಸ್ತಾನು ಕೊರತೆ ಬೆಲೆ ಏರಿಕೆಗೆ ಪ್ರಮುಖ ಕಾರಣ. ಜನರು ಬೆಲೆ ಏರಿಕೆಗೆ ಪ್ರಾಫಿಟ್ ಬುಕ್ಕಿಂಗ್ ಕಾರಣ ಎಂದೂ ಹೇಳ್ತಿದ್ದಾರೆ. ಬೆಳೆ ವಿಫಲವಾದ ಕಾರಣ ಎರಡನೇ ಬೆಳೆ ನಾಟಿ ಮಾಡಲು ಸಮಯ ಹಿಡಿಯಿತು. ಇದು ಕೂಡ ಬೆಲೆ ಏರಿಕೆಗೆ ಕಾರಣವಾಗ್ತಿದೆ.
ಸಗಟು ವ್ಯಾಪಾರಿಗಳ ಪ್ರಕಾರ ಹೊಸ ಬೆಳೆ ಬಂದ ಮೇಲೆ ಬೆಲೆ ಕಡಿಮೆಯಾಗಲಿದೆ. ಹೊಸ ಬೆಳ್ಳುಳ್ಳಿ ಮಾರುಕಟ್ಟೆಗೆ ಬರುತ್ತಿದ್ದಂತೆ ಬೆಳ್ಳುಳ್ಳಿ ಬೆಲೆಯಲ್ಲಿ ಇಳಿಕೆಯಾಗಲಿದೆ. ಫೆಬ್ರವರಿ ಅಂತ್ಯದ ವೇಳೆಗೆ ಬೆಳ್ಳುಳ್ಳಿ ಅಗ್ಗವಾಗುವ ಸಾಧ್ಯತೆ ಇದೆ.
ದೊಡ್ಡಕವಲಂದೆ: 3 ವರ್ಷಗಳಾದರೂ ನಿರ್ಮಾಣವಾಗದ ಶೌಚಾಲಯ; ಗುತ್ತಿಗೆದಾರ ನಾಪತ್ತೆ ಶ್ರೀಧರ್ ಆರ್. ಭಟ್ ನಂಜನಗೂಡು: ಸ್ವಚ್ಛತೆಗಾಗಿ ಕೇಂದ್ರ ಮತ್ತು ರಾಜ್ಯ…
ಬಿ. ಆರ್. ಜೋಯಪ್ಪ ಕೊಡಗಿನಲ್ಲಿ ಸ್ಥಳೀಯರು ‘ಕಾಡುಪಾಪ’ವನ್ನು ‘ಚೀಂಗೆ ಕೋಳಿ’ ಎಂದು ಕರೆಯುತ್ತಾರೆ. ಇದೊಂದು ನಿಶಾಚರಿ, ನಿರುಪದ್ರವಿ ಕಾಡಿನ ಜೀವಿ.…
ಚಾಮರಾಜನಗರ ನೆಲದ ಕಲಾವಿದರು, ಅಲ್ಲಿನ ಆಡುಭಾಷೆಯನ್ನೇ ಜೀವಾಳವಾಗಿಸಿಕೊಂಡು ಗೆದ್ದ ಅನ್ನ ಚಲನಚಿತ್ರ ರಶ್ಮಿ ಕೋಟಿ ಮನೆಗೆ ಕರೆದುಕೊಂಡು ಹೋಗಲು ಬಂದ…
ತುಳುನಾಡಿನಲ್ಲಿ ಹುಟ್ಟಿ ಬೆಳೆದ ಎಚ್. ನಾಗವೇಣಿಯವರ ಕತೆಗಳಲ್ಲಿ ಕೂಡ ಈ ತಾಯ್ನೆಲದ ಮಣ್ಣಿನ ತುಡಿತ ಮಿಡಿತಗಳು ನರನಾಡಿಯಂತೆ ವ್ಯಾಪಿಸಿರುತ್ತವೆ. ಆ…
ಐಐಟಿ, ಐಐಎಂ, ಐಐಎಸ್ಪಿ, ಎನ್ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ. ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು…
ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ಸುಮಾರು ನಾಲ್ಕು ಸಾವಿರದಷ್ಟು ಉಪನ್ಯಾಸಕ ಹುದ್ದೆಗಳು ಖಾಲಿ ಇದ್ದು, ಮುಖ್ಯಮಂತ್ರಿಗಳ ಅನುಮತಿ…