ರಾಜ್ಯ

ಗೌರಿ ಹತ್ಯೆ ಪ್ರಕರಣ: 11ನೇ ಆರೋಪಿಗೆ ಜಾಮೀನು

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಹೇಳಲಾಗಿದೆ.

ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ ಮೋಹನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ. ಇಡೀ ಪ್ರಕರಣದಲ್ಲಿ ಮೋಹನ್ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪ್ರಕರಣವೇನು: 2017ರ ಸೆ.5ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಗೌರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಪ್ರಮುಖ ರೂವಾರಿ ಅಮೋಲ್ ಕಾಳೆ., ಪರಶುರಾಮ್ ವಾಗೋರೆ ಗುಂಡು ಹಾರಿಸಿದ್ದರೆ, ಬೈಕ್ ಚಲಾಯಿಸಿದ ಆರೋಪ ಗಣೇಶ್ ಮಿಸ್ಕಿನ್ ಮೇಲಿದೆ.

ಎಸ್‌ಐಟಿ 17 ಆರೋಪಿ ಗಳನ್ನು ಬಂಧಿಸಿ, 8,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳಿದ್ದಾರೆ. ಮೋಹನ್ 11ನೇ ಆರೋಪಿಯಾಗಿದ್ದು, ಕೊಲೆಗೆ ಸಂಚು ಆರೋಪ ಆತನ ಮೇಲಿದೆ.ಇದೀಗ ಆತನಿಗೆ ಜಾಮೀನು ನೀಡಲಾಗಿದೆ.

andolanait

Recent Posts

ಡಾ.ಬಿ.ಆರ್‌.ಅಂಬೇಡ್ಕರ್‌ ಹೆಸರಿನಲ್ಲಿ ಸ್ಕಾಲರ್‌ಶಿಪ್‌ ಯೋಜನೆ ಘೋಷಣೆ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ಡಾ.ಬಿ.ಆರ್‌.ಅಂಬೇಡ್ಕರ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸದನದಲ್ಲಿ ಅಗೌರವದ ಹೇಳಿಕೆ ನೀಡಿರುವುದಕ್ಕೆ ದೇಶಾದ್ಯಂತ ಆಕ್ರೋಶ…

20 mins ago

ಐಪಿಎಲ್‌ 2025: ದೇಶೀಯ ಮಿನಿ ಚುಟುಕು ಟಿ20 ಕ್ರಿಕೆಟ್‌ ಹಬ್ಬ ಆರಂಭಕ್ಕೆ ದಿನಾಂಕ ನಿಗದಿ

ದೇಶಿಯ ಮಿನಿ ಚುಟುಕು ಕ್ರಿಕೆಟ್‌ ಟೂರ್ನಿಗಳಲ್ಲಿ ಯಶಸ್ಸು ಕಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌), ಸೀಸನ್‌ 18ರ ಆರಂಭಕ್ಕೆ ದಿನಾಂಕ…

28 mins ago

ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಅಗತ್ಯವಾಗಿ ಕಾನೂನು…

38 mins ago

ಮಳವಳ್ಳಿ ಬಳಿ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಸಾವು, ಓರ್ವನ ಗಂಭೀರ

ಮಂಡ್ಯ: ಪ್ರಾಜೆಕ್ಟ್‌ ವರ್ಕ್‌ ಜೊತೆಯಲ್ಲಿ ಪ್ರವಾಸ ಮಾಡಲೆಂದು ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ‌ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ…

58 mins ago

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಖರೀದಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಇಂದು ಸಚಿವ ಚಲುವರಾಯಸ್ವಾಮಿ…

1 hour ago

ಒನ್‌ 8 ಕಮ್ಯೂನ್‌ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌: ವಿರಾಟ್‌ ಕೊಹ್ಲಿಗೆ ಬಿಗ್‌ಶಾಕ್‌

ಬೆಂಗಳೂರು: ಭಾರತದ ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನ ಒನ್‌…

1 hour ago